Connect with us

LATEST NEWS

ಮಂಗಳೂರು ಬಿಜೆಪಿ ಬೆಂಬಲಿತ ಪಂಚಾಯತ್ ಸದಸ್ಯನ ಕೊಲೆ

ಮಂಗಳೂರು ಜುಲೈ 11: ಬಿಜೆಪಿ ಬೆಂಬಲಿತ ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯರೊಬ್ಬರ ಮೇಲೆ ದಾಳಿ ನಡೆಸಿದ ಹತ್ಯೆಗೈದಿರುವ ಘಟನೆ ನಿನ್ನೆ ಸಂಜೆ ಅಡ್ಯಾರ್ ಸಮೀಪ ನಡೆದಿದೆ. ಮೃತರನ್ನು ಅಡ್ಯಾರ್ ಗ್ರಾಮಪಂಚಾಯತ್ ಸದಸ್ಯ ಯಾಕೂಬ್ ಎಂದು ಗುರುತಿಸಲಾಗಿದೆ.

ಶುಕ್ರವಾರ ಸಂಜೆ ಅಡ್ಯಾರ್‌ ಸಮೀಪದಲ್ಲಿ ಸ್ಥಳೀಯ ಶಾಕೀರ್ ಹಾಗೂ ಯಾಕೂಬ್ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದ್ದು,ಗಲಾಟೆ ತಾರಕಕ್ಕೆರಿ ಶಾಕೀರ್ ಯಾಕೂಬ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.ಈ ಗಲಾಟೆಯಲ್ಲಿ ಯಾಕೂಬ್ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಯಾಕೂಬ್‌ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ. ಇನ್ನು ಕೊಲೆಗೆ ವೈಯಕ್ತಿಕ ಹಾಗೂ ರಾಜಕೀಯ ಕಾರಣ ಎಂದು ಹೇಳಲಾಗುತ್ತಿದೆ.
ಈ ಕುರಿತಾಗಿ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Facebook Comments

comments