Connect with us

LATEST NEWS

ಕುಡಿದ ಮತ್ತಿನಲ್ಲಿ ಪತ್ನಿಯನ್ನು ಕಟ್ಟಿಗೆಯಲ್ಲಿ ಹೊಡೆದು ಕೊಲೆ ಮಾಡಿದ ಗಂಡ

ಬೆಳ್ತಂಗಡಿ ಜನವರಿ 8: ಕುಡಿದ ಮತ್ತಿನಲ್ಲಿ ಪತಿ ತನ್ನ ಪತ್ನಿಯನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯಾ ಗಂಡಿಬಾಗಿಲು ಸಮೀಪ ನಡೆದಿದೆ. ಮೃತ ಮಹಿಳೆಯನ್ನು ನೆರಿಯಾ ಗ್ರಾಮದ ಗಂಡಿಬಾಗಿಲು ನಿವಾಸಿ ಸೌಮ್ಯ ಫ್ರಾನ್ಸಿಸ್ (40) ಎಂದು ಗುರುತಿಸಲಾಗಿದ್ದು, ಈಕೆಯ ಪತಿ ಜಾನ್ ಸನ್ (47) ಕೊಲೆಗೈದ ಆರೋಪಿ.


ಮೂಲತಃ ಕೇರಳದ ಇರುಟ್ಟಿ ನಿವಾಸಿಗಳಾಗಿರುವ ಇವರು ಗಂಡಿಬಾಗಿಲು ಸಮೀಪ ಜಮೀನು ಹೊಂದಿದ್ದರು. ಇಬ್ಬರು ರಬ್ಬರ್ ಟ್ಯಾಪಿಂಗ್ ವೃತ್ತಿ ನಿರ್ವಹಿಸುತ್ತಿದ್ದು, ಪ್ರತಿ ನಿತ್ಯ ಪತಿ ಪತ್ನಿ ಮಧ್ಯೆ ಗಲಾಟೆ ಸಂಭವಿಸುತ್ತಿದ್ದು, ಗುರುವಾರ ವಿಕೋಪಕ್ಕೆ ತೆರಳಿ ಪತಿ ಜಾನ್ ಸನ್ ಕಟ್ಟಿಗೆಯ ತುಂಡಿನಲ್ಲಿ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.


ರಾತ್ರಿ 11 ಗಂಟೆಗೆ ಘಟನೆ ಸಂಭವಿಸಿದ್ದು, ಕುಸಿದು ಬಿದ್ದ ಸೌಮ್ಯ ಅವರನ್ನು ತಕ್ಷಣ ಜಾನ್ ಸನ್ ಸ್ಥಳೀಯರ ಸಹಾಯದಿಂದ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ತೆರಳಬೇಕಾದರೆ ಸೌಮ್ಯ ಮೃತಪಟ್ಟಿದ್ದಾರೆ. ಇವರಿಗೆ 10 ವರ್ಷದ ಹೆಣ್ಣು ಮಗುವೊಂದಿದೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

comments