ಉಡುಪಿ, ಜುಲೈ 21: ಕುಡಿದ ಮತ್ತಿನಲ್ಲಿ ತಾಯಿಯನ್ನು ಹಿಯಾಳಿಸಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬನನ್ನು ಮರದ ತುಂಡಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ತಮಿಳುನಾಡು ಮೂಲದ ಕುಮಾರ್(32) ಎಂದು ಗುರುತಿಸಲಾಗಿದೆ. ಕುಟ್ಟಿ ಮತ್ತು ನವೀನ್ ಎಂಬುವವರು ಇಂದ್ರಾಳಿ ಸಮೀಪ ಬಾರ್ ನಿಂದ ಕುಡಿದು ಬರುತ್ತಿರುವಾದ ಕೊಲೆಯಾದ ವ್ಯಕ್ತಿ ಕುಡಿದ ಅಮಲಿನಲ್ಲಿ ನವೀನ್ ಮತ್ತು ಕುಟ್ಟಿಯ ತಾಯಿಗೆ ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ ಎಂದು ಹೇಳಲಾಗಿದ್ದು, ಇದು ಮೂವರ ನಡುವೆ ಗಲಾಟೆಗೆ ಕಾರಣವಾಗಿದೆ.
ಈ ಸಂದರ್ಭ ನವೀನ್ ಮತ್ತು ಕುಟ್ಟಿ ಸೇರಿ ಮರದ ಸೊಂಟೆ ಯಿಂದ ಕುಮಾರನ ತಲೆಗೆ ಹೊಡೆದಾಗ ಆತನು ಸ್ಥಳದಲ್ಲೇ ಮೃತಪಟ್ಟಿರುತ್ತಾನೆ. ಉಡುಪಿ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರೀಶೀಲನೆ ನಡೆಸಿದ್ದು, ಕೊಲೆ ಆರೋಪಿಗಳಾದ ಇಬ್ಬರನ್ನು ಬಂಧಿಸಿದ್ದಾರೆ.