ವಿಧ್ಯಾರ್ಥಿನಿ ಅಂಜನಾ ಬರ್ಬರ ಕೊಲೆ ಪ್ರಕರಣ ಪ್ರಮುಖ ಆರೋಪಿ ಬಂದನ

ಮಂಗಳೂರು ಜೂನ್ 8: ಚಿಕ್ಕಮಗಳೂರು ಜಿಲ್ಲೆಯ ವಿಧ್ಯಾರ್ಥಿನಿ ಅಂಜನಾ ವಶಿಷ್ಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರ ಯಶಸ್ವಿಯಾಗಿದ್ದಾರೆ. ಕೊಲೆ ನಡೆದ 24 ಗಂಟೆಯ ಒಳಗೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಸಂದೀಪ್ ರಾಥೋಡ್ ಎಂದು ಗುರುತಿಸಲಾಗಿದ್ದು, ಈತ ವಿಜಾಪುರ ಜಿಲ್ಲೆಯ ಸಿಂದಗಿ ತಾಲೂಕಿನವನು ಎಂದು ಗುರುತಿಸಲಾಗಿದೆ.

ಮಂಗಳೂರ ಅತ್ತಾವರದಲ್ಲಿರುವ ಬಾಡಿಗೆ ಕೊಠಡಿಯಲ್ಲಿ ನಿನ್ನೆ ಕೊಲೆಯಾಗಿದ್ದ ಸ್ಥಿತಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ವಿಧ್ಯಾರ್ಥಿನಿಯ ಅಂಜನಾ ವಶಿಷ್ಟ ಪತ್ತೆಯಾಗಿದ್ದರು. ಪ್ರಕರಣದ ತನಿಖೆಗೆ ಕೈಗೆತ್ತಿಕೊಂಡ ಮಂಗಳೂರು ಪೊಲೀಸರು ಘಟನೆ ನಡೆದ 24 ಗಂಟೆಯ ಒಳಗೆ ಆರೋಪಿಯನ್ನು ಸಿಂದಗಿಯಲ್ಲಿ ಬಂಧಿಸಿದ್ದಾರೆ.

ಮೃತ ವಿಧ್ಯಾರ್ಥಿನಿ ಅಂಜನಾ ಮಂಗಳೂರಿನಲ್ಲಿ ಎಂಎಸ್ಸಿ ಮುಗಿಸಿದ್ದು, ಬ್ಯಾಂಕಿಂಗ್ ಪರೀಕ್ಷೆ ಬರೆಯಲು ಕೋಚಿಂಗ್ ತೆಗೆದುಕೊಳ್ಳಲು ಮಂಗಳೂರಿಗೆ ಆಗಮಿಸಿದ್ದಳು. ಆರೋಪಿ ಸಂದೀಪ್ ರಾಥೋಡ್ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ನೇಮಕಾತಿ ಪರೀಕ್ಷೆಗೆ ತರಭೇತಿ ಪಡೆಯಲು ಮಂಗಳೂರಿಗೆ ಆಗಮಿಸಿದ್ದು ಅತ್ತಾವರದಲ್ಲಿ ಬಾಡಿಗೆ ಮನೆ ಪಡೆದುಕೊಂಡಿದ್ದ, ಮನೆಗೆ ಅಂಜನಾ ಶುಕ್ರವಾರ ಬೆಳಿಗ್ಗೆ ಆಗಮಿಸಿದ್ದು, ಆರೋಪಿ ಅಂಜನಾಳನ್ನು ತನ್ನ ಪತ್ನಿ ಎಂದು ಮನೆ ಮಾಲೀಕರಲ್ಲಿ ಪರಿಚಯಿಸಿಕೊಂಡಿದ್ದ ಎಂದು ಹೇಳಲಾಗಿದೆ.

ಅಂಜನಾಳ ತಲೆಯನ್ನು ಮಂಚದ ಸರಳಿನೆಡೆಯಲ್ಲಿ ನುಗ್ಗಿಸಿ ಟಿವಿ ಕೇಬಲ್ ನಿಂದ ಕತ್ತು ಬಿಗಿದು ಬರ್ಬರವಾಗಿ ಕೊಲೆ ಮಾಡಲಾಗಿತ್ತು.

Facebook Comments

comments