Connect with us

    LATEST NEWS

    ಕರಾವಳಿ ಜಿಲ್ಲೆಗಳಲ್ಲಿ ಮುಂದುವರಿದ ಹಿಂದೂ ಸಂಘಟನೆಯ ಕಾರ್ಯಕರ್ತರ ಕಗ್ಗೊಲೆ

    ಕರಾವಳಿ ಜಿಲ್ಲೆಗಳಲ್ಲಿ ಮುಂದುವರಿದ ಹಿಂದೂ ಸಂಘಟನೆಯ ಕಾರ್ಯಕರ್ತರ ಕಗ್ಗೊಲೆ

    ಮಂಗಳೂರು ಜನವರಿ 3: ಮಂಗಳೂರಿನಲ್ಲಿ ಮತ್ತೆ ನೆತ್ತರು ಹರಿದಿದೆ. ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಕಾಟಿಪಳ್ಳ ಎಂಬಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಡಿದು ಕೊಲೆ ಮಾಡಿದ್ದಾರೆ.

    ಮೃತ ಪಟ್ಟ ಯುವಕನನ್ನು ಕೃಷ್ಣಾಪುರದ ಗಣೇಶ್ ಪುರ ನಿವಾಸಿ ದೀಪಕ್ (32) ಎಂದು ಗುರುತಿಸಲಾಗಿದೆ. ಡೊಕೊಮೊ ಮೊಬೈಲ್ ಕಂಪನಿಯಲ್ಲಿ ಕರೆನ್ಸಿ ಡಿಸ್ಟ್ರಿಬ್ಯೂಟರ್ ಆಗಿದ್ದ ದೀಪಕ್ ಸ್ಥಳೀಯ ಹಿಂದು ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಎಂದು ಹೇಳಲಾಗಿದೆ.
    ಕಾಟಿಪಳ್ಳದಲ್ಲಿ ಬೈಕಿನಲ್ಲಿ ಹೋಗುತ್ತಿದ್ದಾಗ ಅಡ್ಡಗಟ್ಟಿದ ಕಾರಿನಲ್ಲಿ ಬಂದ 4 ಮಂದಿ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಯುತ್ತಿದ್ದ ಸಂದರ್ಭದಲ್ಲಿ ಸ್ಥಳೀಯ ಮುಸ್ಲಿಮರು ಕಲ್ಲೆಸೆದು ದುಷ್ಕರ್ಮಿಗಳನ್ನು ಓಡಿಸಿದ್ದಾರೆ. ಅಷ್ಟರಲ್ಲಿ ತೀವ್ರ ಗಾಯಗೊಂಡ ದೀಪಕ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.

    ಮಜೀದ್ ಎಂಬವರ ಮೊಬೈಲ್ ಶಾಪ್ ನಲ್ಲಿ ದೀಪಕ್ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗಿದ್ದು, ಕಲೆಕ್ಷನ್ ಹಣವನ್ನು ಅಂಗಡಿಗೆ ಕೊಟ್ಟು ಮನೆಗೆ ವಾಪಾಸಾಗುತ್ತಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಬೈಕನ್ನು ಅಡ್ಡಗಟ್ಟಿ ಕಾಟಿಪಳ್ಳದ ಮೂಡಾಯಿಕೋಡಿ ಎಂಬಲ್ಲಿ ಹತ್ಯೆ ಮಾಡಿದ್ದಾರೆ.

    ಸುರತ್ಕಲ್ ಮತ್ತು ಮಂಗಳೂರಿನ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply