Connect with us

    KARNATAKA

    ಮುಳಬಾಗಿಲು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಜಗನ್ಮೋಹನ್‌ ರೆಡ್ಡಿ ಹತ್ಯೆ

    ಮುಳಬಾಗಿಲು, ಜೂನ್ 07: ಮುಳಬಾಗಿಲು ನಗರಸಭೆ ಸದಸ್ಯ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ ಜಗನ್ಮೋಹನ್ ರೆಡ್ಡಿ (45) ಅವರನ್ನು ಗಂಗಮ್ಮನಗುಡಿ ದೇಗುಲದ ಬಾಗಿಲಿನಲ್ಲಿ ಮಂಗಳವಾರ ಬೆಳಿಗ್ಗೆ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

    ಮುತ್ಯಾಲಪೇಟೆಯ ಅವರ ನಿವಾಸದ ಬಳಿ ಇರುವ ದೇಗುಲದ ಬಾಗಿಲು ತೆರೆಯುವಾಗ ಹೊರಗಡೆ ನಿಂತಿದ್ದ ಕೆಲ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಏಕಾಏಕಿ ದಾಳಿ ನಡೆಸಿರುವುದು ಗೊತ್ತಾಗಿದೆ. ಬೆಳಿಗ್ಗೆ 5.45ಕ್ಕೆ ಹತ್ಯೆ ನಡೆದಿದೆ. ಈ ಸಂಬಂಧ ಕೆಲ ಮಹತ್ವದ ಅಂಶಗಳು ಲಭ್ಯವಾಗಿದ್ದು, ಮತ್ತಷ್ಟು ಮಾಹಿತಿ ಕಲೆಹಾಕಲಾಗುತ್ತಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೇವರಾಜ್‌ ‘ಪ್ರಜಾವಾಣಿ’ಗೆ ತಿಳಿಸಿದರು.

    ಅವರಿಗೆ ಪತ್ನಿ ಹಾಗೂ ಹೆಣ್ಣು ಮಗುವಿದ್ದು, ಸತತ ಎರಡನೇ ಬಾರಿ ಪಕ್ಷೇತರ ಸದಸ್ಯರಾಗಿ ಆಯ್ಕೆಯಾಗಿದ್ದರು. ಮಾಜಿ ಶಾಸಕ ಕೊತ್ತೂರು ಮಂಜುನಾಥ್‌ ಅವರ ಬಣದಲ್ಲಿ ಗುರುತಿಸಿಕೊಂಡಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply