KARNATAKA
ಮುರುಡೇಶ್ವರ ಕಡಲ ತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಕಾರವಾರ, ಡಿಸೆಂಬರ್ 11: ಕೋಲಾರದ ಶಾಲಾ ವಿಧ್ಯಾರ್ಥಿನಿಯರು ಸಮುದ್ರಪಾಲಾದ ಬಳಿಕ ಇದೀಗ ಉತ್ತರ ಕನ್ನಡ ಜಿಲ್ಲಾಡಳಿತ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ಜಿಲ್ಲಾಡಳಿತ ತಾತ್ಕಾಲಿಕ ನಿರ್ಬಂಧ ವಿಧಿಸಿದೆ. ಮುಂದಿನ ಆದೇಶದವರೆಗೂ ಕಡಲತೀರಕ್ಕೆ ನಿರ್ಬಂಧ ವಿಧಿಸಿ, ಈ ಕುರಿತು ಎಸ್ಪಿ ಎಂ.ನಾರಾಯಣ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.
ಶಾಲಾ ಮಕ್ಕಳು ಪ್ರವಾಸಕ್ಕೆಂದು ಮುರುಡೇಶ್ವರ ಕಡಲ ತೀರಕ್ಕೆ ಹೋಗಿದ್ದರು. ನೋಡ ನೋಡುತ್ತಿದ್ದಂತೆ, ಅಲೆಗಳ ಅಬ್ಬರಕ್ಕೆ ಕೊಚ್ಚಿಕೊಂಡು ಹೋದ ಏಳು ಜನರ ಪೈಕಿ ನಾಲ್ವರು ವಿದ್ಯಾರ್ಥಿನಿಯರು (Students) ನೀರು ಪಾಲಾಗಿದ್ದರು. ನಿನ್ನೆ ಒಬ್ಬ ಮತ್ತು ಇಂದು ಮೂವರ ವಿದ್ಯಾರ್ಥಿನಿಯರ ಮೃತದೇಹಗಳು ಪತ್ತೆ ಆಗಿವೆ. ಸದ್ಯ ಈ ಪ್ರಕರಣದಿಂದಾಗಿ ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ.