KARNATAKA
ಎರಡನೇ ಪೋಕ್ಸೋ ಪ್ರಕರಣದಲ್ಲಿ ಮತ್ತೆ ಜೈಲು ಸೇರಿದ ಮುರುಘಾ ಮಠದ ಶಿವಮೂರ್ತಿ ಸ್ವಾಮಿಜಿ

ಚಿತ್ರದುರ್ಗ ನವೆಂಬರ್ 20: 13 ತಿಂಗಳುಗಳ ಕಾಲ ಜೈಲಿನಲ್ಲಿದ್ದು ಮೊನ್ನೆಯಷ್ಟೇ ಬೇಲ್ ಪಡೆದು ಹೊರಗೆ ಬಂದಿದ್ದ ಮುರುಘಾ ಮಠದ ಶಿವಮೂರ್ತಿ ಸ್ವಾಮಿಜಿ ಅವರು ಮತ್ತೆ ಜೈಲು ಸೇರುವಂತಾಗಿದೆ. ಎರಡನೇ ಪೋಕ್ಸೊ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಡಿಸೆಂಬರ್ 2ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸೋಮವಾರ ಆದೇಶಿಸಿದೆ.
ದಾವಣಗೆರೆಯ ವಿರಕ್ತ ಮಠದಲ್ಲಿ ಶರಣರನ್ನು ಬಂಧಿಸಿದ ಗ್ರಾಮಾಂತರ ಠಾಣೆಯ ಪೊಲೀಸರು ನೇರವಾಗಿ ಚಿತ್ರದುರ್ಗ ನ್ಯಾಯಾಲಯಕ್ಕೆ ಹಾಜರುಪಡಿಸಿದರು. 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶೆ ಬಿ.ಕೆ.ಕೋಮಲಾ ಅವರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.
