Connect with us

    KARNATAKA

    ಮುರುಘಾ ಶ್ರೀಗಳು 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ…..!!

    ಚಿತ್ರದುರ್ಗ ಸೆಪ್ಟೆಂಬರ್ 02: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಬಂಧಿತರಾಗಿರುವ ಮುರುಘಾ ಮಠದ ಶ್ರೀಗಳನ್ನು 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಮತಿ ಬಿ.ಕೆ ಕೋಮಲಾ ಆದೇಶಿಸಿದ್ದಾರೆ.

    ಆರೋಪಿಯನ್ನು ಐದು ದಿನಗಳ ಕಾಲ ತನಿಖೆ ನಡೆಸುವ ಸಲುವಾಗಿ ಕಸ್ಟಡಿಗೆ ನೀಡುವಂತೆ ಪೊಲೀಸರು ಕೋರ್ಟ್‍ಗೆ ಮನವಿ ಸಲ್ಲಿಸಿದರು, ಈ ವೇಳೆ ಆರೋಪಿ ಎಲ್ಲಿ ಎಂದು ಕೋರ್ಟ್ ಪ್ರಶ್ನೆ ಮಾಡಿದೆ. ಆರೋಪಿ ಈಗ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ಪೊಲೀಸರು ತಿಳಿಸಿದರು. ಕೋರ್ಟ್‍ಗೆ ಮಾಹಿತಿ ನೀಡದೆ ಹೇಗೆ ಆಸ್ಪತ್ರೆಗೆ ದಾಖಲಿಸಿದ್ದಾರೆ. ತಕ್ಷಣವೇ ಆರೋಪಿ ಹಾಜರಾಗಬೇಕು, ಇಲ್ಲ ಮೆಡಿಕಲ್ ರಿಪೋರ್ಟ್ ತರುವಂತೆ ಕೋರ್ಟ್ ಸೂಚನೆ ನೀಡಿತು.

    ಇಂದು ಮಧ್ಯಾಹ್ನ ನ್ಯಾಯಾಲಯಕ್ಕೆ ಹಾಜರು ಪಡಿಸಲು ನ್ಯಾಯಾಧೀಶರು ಸೂಚಿಸಿದ್ದ ಹಿನ್ನೆಲೆ ಸಂಜೆ 4 ಗಂಟೆಗೆ ಶ್ರೀಗಳು ಕೋರ್ಟ್‌ಗೆ ಹಾಜರಾಗಿದ್ದಾರೆ. ಕೋರ್ಟ್ ವಿಚಾರಣೆ ನಡೆಸಿ 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಇಂದಿನಿಂದ ಸೆಪ್ಟೆಂಬರ್ 6ರ ವರೆಗೆ ಶ್ರೀಗಳು ಪೊಲೀಸ್ ಕಸ್ಟಡಿಯಲ್ಲಿರಲಿದ್ದಾರೆ. ಜೊತೆಗೆ ಅಗತ್ಯವಿದ್ದರೆ ಪೊಲೀಸ್ ಕಸ್ಟಡಿಯಲ್ಲೇ ವೈದ್ಯಕೀಯ ನೆರವು ನೀಡುವಂತೆ ಚಿತ್ರದುರ್ಗದ ಜೆಎಂಎಫ್ ಕೋರ್ಟ್ ಆದೇಶಿಸಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *