KARNATAKA
ಗೋಕರ್ಣದಲ್ಲಿ ಪಿತೃಕಾರ್ಯ ನೆರವೇರಿಸಿದ ಮುಸ್ಲಿಂ ಕುಟುಂಬ
ಕಾರವಾರ ಅಕ್ಟೋಬರ್ 07: ಗೋಕರ್ಣದಲ್ಲಿ ಹಿಂದೂ ಕುಟುಂಬಗಳು ಮಾತ್ರ ಮಾಡುವ ಪಿತೃಕಾರ್ಯವನ್ನು ಇದೀಗ ಮುಸ್ಲಿಂ ಕುಟುಂಬವೊಂದು ನರೆವೇರಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಾರ್ಪೆಂಟರ್ ಕೆಲಸ ಮಾಡುವ ಮುಸ್ಲಿಂ ಕುಟುಂಬವೊಂದು ಧಾರವಾಡದ ಜ್ಯೋತಿಷಿ ಒಬ್ಬರ ಸಲಹೆ ಮೇರೆಗೆ ನಾರಾಯಣ ಬಲಿ, ತ್ರಿಪಿಂಡಿ ಶ್ರಾದ್ಧ ಮತ್ತು ತಿಲಹವನ ಇಲ್ಲಿಯ ಪಿತೃಶಾಲೆಯಲ್ಲಿ ನಡೆಸಿದ್ದಾರೆ.
ಮುಸ್ಲಿಂ ಕುಟುಂಬ ಜ್ಯೋತಿಷಿಯ ಸಲಹೆಯಂತೆ ಗೋಕಣಕ್ಕೆ ಬಂದು ಕ್ಷೇತ್ರ ಪುರೋಹಿತರಾದ ವೇ.ನಾಗರಾಜ ಭಟ್ ಹಾಗೂ ವೇ.ಸುಬ್ರಹಣ್ಯ ಚಿತ್ರಿಗೆಮಠ ಇವರ ನೇತೃತ್ವದಲ್ಲಿ ಎಲ್ಲಾ ಪೂಜಾ ಕಾರ್ಯ ನೆರವೇರಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಧಾರವಾಡದ ಧಾನೇಶ್ವರಿ ನಗರದ ಶಂಸಾದ್ ನಾವು ಮೊದಲಿನಿಂದಲೂ ಕುಂಡಲಿ, ಜಾತಕ, ಹಿಂದೂ ಸಂಪ್ರದಾಯದ ಮೇಲೆ ನಂಬಿಕೆ ಉಳ್ಳವರು. ನಮ್ಮ ತಂದೆ ಗದಗಿನ ವೀರನಾರಾಯಣ ದೇವಸ್ಥಾನದ ಹತ್ತಿರ ಬ್ರಾಹ್ಮಣ ಮತ್ತು ಲಿಂಗಾಯತ ಸಮುದಾಯದವರ ಜೊತೆಯಲ್ಲಿಯೇ ಬೆಳೆದವರು. ತಮ್ಮನಿಗೆ ಮದುವೆ ಸಂಬಂಧ ಸರಿಯಾಗಿ ಹೆಣ್ಣು ಸಿಗದೇ ಇದ್ದಾಗ ಜ್ಯೋತಿಷಿಯ ಮೊರೆ ಹೋಗಿದ್ದೆವು. ಅವರು ತಿಳಿಸಿದಂತೆ ತಮ್ಮನ ಮದುವೆ, ಮಾನಸಿಕ ಶಾಂತಿ ಹಾಗೂ ಉದ್ಯೋಗದಲ್ಲಿ ಏಳಿಗೆ ಸಿಗಲಿ ಎಂಬ ಉದ್ಧೇಶದಿಂದ ಈ ಕಾರ್ಯ ಮಾಡಿದ್ದೇವೆ ಎಂದಿದ್ದಾರೆ.
ಗೋಕರ್ಣದಲ್ಲಿ ಮುಸ್ಲಿಂ ಕುಟುಂಬ ಇದೇ ಮೊದಲ ಬಾರಿಗೆ ಬಾರಿಗೆ ಪಿತೃಕಾರ್ಯ ನೆರವೇರಿಸಿದೆ ಎಂಬ ಮಾತುಗಳು ಕೇಳಿಬಂದಿವೆ.