ಮುಸ್ಲಿಂ ಮೂಲಭೂತವಾದಿಗಳ ಕೆಂಗಣ್ಣಿಗೆ ಗುರಿಯಾದ ಯು ಟಿ ಖಾದರ್

ಮಂಗಳೂರು ಜನವರಿ 29: ತುಳುನಾಡಿನ ಕಾರಣಿಕ ದೈವ ಕೊರಗಜ್ಜನ ದೇವಸ್ಥಾನಕ್ಕೆ ಆಹಾರ ಸಚಿವ ಯುಟಿಖಾದರ್ ಭೇಟಿ ನೀಡಿ ಪ್ರಸಾದ ಸ್ವೀಕರಿಸಿರುವುದು ಇದೀಗ ಮುಸ್ಲಿಂ ಮೂಲಭೂತವಾದಿಗಳ ವಿರೋಧಕ್ಕೆ ಕಾರಣವಾಗಿದೆ.

ಕಳೆದ ಕೆಲ ದಿನಗಳ ಹಿಂದೆ ಮಂಗಳೂರಿನ ಪ್ರಸಿದ್ದ ಕೊರಗಜ್ಜನ ಕ್ಷೇತ್ರದಲ್ಲಿ ಕೊರಗಜ್ಜನಿಗೆ ನರ್ತನ ಸೇವೆ ನಡೆದಿದ್ದು ಈ ಸಂಧರ್ಭದಲ್ಲಿ ಸಚಿವ ಯು ಟಿ ಖಾದರ್ ಕೂಡಾ ಭೇಟಿ ನೀಡಿದ್ದರು. ಭೇಟಿ ನೀಡಿದ್ದು ಮಾತ್ರವಲ್ಲದೆ ಸ್ವತಃ ದೈವ ಪಾತ್ರಿಯಿಂದ ಕೊರಗಜ್ಜನ ಪ್ರಸಾದ ಸ್ವೀಕರಿಸಿದರು. ಆದರೆ ಇದೀಗ ಖಾದರ್ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿರುವುದು ಮುಸ್ಲಿಂ ಮೂಲಭೂತವಾದಿಗಳ ಕಣ್ಣು ಕೆಂಪಾಗಿಸಿದೆ.
ಖಾದರ್ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ನಿಂದಾನಾತ್ಮಕವಾಗಿ ಟೀಕಿಸಿದ್ದು ಮುಸ್ಲಿಂ ನಾಗಿ ಖಾದರ್ ಹಿಂದೂ ಕ್ಷೇತ್ರಕ್ಕೆ ಭೇಟಿ ನೀಡಿದ್ದು ತಪ್ಪು ಎಂದು ಟೀಕಿಸಿದ್ದಾರೆ. ಹಿಂದೂಗಳ ಕ್ಷೇತ್ರಕ್ಕೆ ಭೇಟಿ ನೀಡಿರೋದ್ರಿಂದ ಹಿಂದೂಗಳು ಮತವನ್ನು ನೀಡೋದಿಲ್ಲ.

ಸುಮ್ಮನೆ ನಾಟಕವಾಡೋದು ಬಿಟ್ಟು ಮುಸ್ಲಿಂ ಧರ್ಮದ ಅನುಯಾಯಿಯಾಗಿ ಮುಂದುವರಿಯಿರಿ ಎಂದು ಟೀಕಿಸಿದ್ದಾರೆ. ಈ ಹಿಂದೆ ಕೇವಲ ಹಿಂದೂ ಸಂಘಟನೆಗಳ ಮುಖಂಡರು ಸೇರಿದಂತೆ ಬಿಜೆಪಿ ನಾಯಕರನ್ನು ಮಾತ್ರ ಗುರಿಯಾಗಿಸಿಕೊಂಡಿದ್ದ ಮುಸ್ಲಿಂ ಮೂಲಭೂತವಾದಿಗಳು ಇದೀಗ ಸಚಿವರನ್ನೇ ಟಾರ್ಗೆಟ್ ಮಾಡಿರೋದು ಧರ್ಮ ಧರ್ಮಗಳ ನಡುವೆ ದ್ವೇಷ ಬಿತ್ತೋ ಹುನ್ನಾರ ನಡೀತಿರೋದು ಜನಸಾಮಾನ್ಯರ ಆತಂಕಕ್ಕೆ ಕಾರಣವಾಗಿದೆ.

VIDEO

Share Information