LATEST NEWS
ನೂಪುರ್ ಶರ್ಮಾ ‘ಧೈರ್ಯಶಾಲಿ ಮಹಿಳೆ’ ಎಂದ ಮುಸ್ಲಿಂ ಯುವಕನ ಬಂಧನ
ಥಾಣೆ, ಜೂನ್ 13: ನೂಪುರ್ ಶರ್ಮಾ ಅವರನ್ನು ‘ಧೈರ್ಯಶಾಲಿ ಮಹಿಳೆ’ ಎಂದು ಶ್ಲಾಘಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ 19 ವರ್ಷದ ಮುಸ್ಲಿಂ ಯುವಕನನ್ನು ಬಂಧಿಸಲಾಗಿದೆ.
ಬಂಧಿತ ವ್ಯಕ್ತಿ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿ ನಗರದ ನಿವಾಸಿಯಾಗಿದ್ದಾನೆ. ಪ್ರವಾದಿ ಮಹಮ್ಮದ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಮಾಡಿದ ಆರೋಪವೂ ಈತನ ಮೇಲಿದೆ. ಸಾಮಾಜಿಕ ಜಾಲತಾಣದ ಪೋಸ್ಟ್ ವೈರಲ್ ಆದ ಬೆನ್ನಲ್ಲೇ ಉದ್ರಿಕ್ತ ಗುಂಪು ಯುವಕನ ಮನೆಗೆ ತೆರಳಿ, ಆತನ ಮೇಲೆ ಹಲ್ಲೆ ನಡೆಸಿ ಪ್ರಶ್ನಿಸುತ್ತಿರುವ ವಿಡಿಯೊ ಕೂಡ ವೈರಲ್ ಆಗಿದೆ. ಆತನ ಮನೆಯ ಮುಂದೆ ಮುಸ್ಲಿಂ ಸಮುದಾಯದ ನೂರಾರು ಮಂದಿ ಪ್ರತಿಭಟನೆ ನಡೆಸಿದ್ದಾರೆ.
ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಯುವಕನನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಪೊಲೀಸರು ಯುವಕನ್ನು ವಶಕ್ಕೆ ಪಡೆದ ವಿಡಿಯೊ ಕೂಡ ವೈರಲ್ ಆಗಿದೆ. ಘಟನೆಗೆ ಸಂಬಂಧಿಸಿ ಇದುವರೆಗೆ ಎಫ್ಐಆರ್ ದಾಖಲಿಸಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
You must be logged in to post a comment Login