LATEST NEWS
ಅಬ್ದುಲ್ ರಹಿಮಾನ್ ಹ*ತ್ಯೆ ಪ್ರಕರಣ – ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ನಾಯಕರ ವಿರುದ್ಧ ಮುಸ್ಲಿಂ ಮುಖಂಡರ ಆಕ್ರೋಶ

ಮಂಗಳೂರು, ಮೇ 28: ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಜಿಲ್ಲೆಯ ಕಾಂಗ್ರೇಸ್ ಮುಖಂಡರ ವಿರುದ್ದ ಮುಸ್ಲಿಂ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದು, ಸಾಮೂಹಿಕ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತು ಸರ್ಕಾರ ವಿರುದ್ಧ ಮುಸ್ಲಿಂ ಮುಖಂಡರು ಆಕ್ರೋಶ ಹೊರಹಾಕುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ನಾಯಕರ ವಿರುದ್ಧ ಮುಸ್ಲಿಂ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದು, ಸಾಮೂಹಿಕ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಜಿಲ್ಲೆಗೆ ಆಗಮಿಸಬೇಕೆಂದು ಪಟ್ಟು ಹಿಡಿದಿದ್ದಾರೆ.

ಇನ್ನು, ಪ್ರಕರಣ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೊಹಮ್ಮದ್ ನಿಸಾರ್ ಎಂಬುವರು ನೀಡಿದ ದೂರು ಆಧರಿಸಿ, ಅಬ್ದುಲ್ ರಹಿಮಾನ್ಗೆ ಪರಿಚಯಸ್ಥರೇ ಆಗಿರುವ ದೀಪಕ್ ಮತ್ತು ಸುಮಿತ್ ಸೇರಿದಂತೆ 15 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.