Connect with us

KARNATAKA

ಆಜಾನ್ ವಿವಾದ – ಆದೇಶ ಪಾಲಿಸದವರಿಗೆ ಗುಂಡು ಹೊಡೆಯುತ್ತೇನೆ – ಪ್ರಮೋದ್ ಮುತಾಲಿಕ್

ಹುಬ್ಬಳ್ಳಿ ಜೂನ್ 02: ಸುಪ್ರೀಂಕೋರ್ಟ್ ಆದೇಶವಿದ್ದರೂ ಧ್ವನಿವರ್ಧಕ ನಿರ್ಬಂಧಿಸಿದ ಸರಕಾರದ ಆದೇಶವನ್ನು ಪಾಲಿಸದವರ ಮೇಲೆ ರಾಜ್ಯ ಸರಕಾರ ಕ್ರಮಕೈಗೊಳ್ಳುವಲ್ಲಿ ವಿಫಲವಾಗಿದ್ದು, ನನಗೆ ಅಧಿಕಾರಿ ನೀಡಿ ಆದೇಶ ಪಾಲಿಸದವರಿಗೆ ಗುಂಡು ಹೊಡೆಯುತ್ತೇನೆ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲಿ ಶಬ್ದಮಾಲಿನ್ಯ ಉಂಟು ಮಾಡುವ ಧ್ವನಿವರ್ಧಕಗಳ ನಿರ್ಬಂಧದ ಕುರಿತಾಗಿ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಆದರೆ ರಾಜ್ಯ ಸರಕಾರ ಮಾತ್ರ ಯಾವುದೇ ನಿರ್ಧಾರ ಕೈಗೊಳ್ಳದೆ ಕುಳಿತಿದೆ. ಕಟ್ಟುನಿಟ್ಟಿನ ನಿರ್ಧಾರ ಕೈಗೊಳ್ಳಲಾಗದಿದ್ದರೆ ರಾಜ್ಯ ಸರ್ಕಾರ ಅಧಿಕಾರದಿಂದ ಕೆಳಗಿಳಿದು, ನನಗೆ ಅಧಿಕಾರ ನೀಡಲಿ’ ಎಂದು ಅಗ್ರಹಿಸಿದರು. ಇನ್ನು ರಾಜ್ಯ ಸರಕಾರದ ವಿರುದ್ದ ಜೂನ್ 8 ರಂದು ರಾಜ್ಯವ್ಯಾಪಿ ಬಿಜೆಪಿ ಶಾಸಕರ ಕಚೇರಿಗಳ ಎದುರು ಪ್ರತಿಭಟನೆ ನಡೆಸುತ್ತೇವೆ. ಸರ್ಕಾರದ ನೀತಿಯನ್ನು ಬಟಾಬಯಲು ಮಾಡಿ, ಮುಂದಿನ ಚುನಾವಣೆಯಲ್ಲಿ ಇಂತಹವರನ್ನು ಗೆಲ್ಲಿಸಬೇಡಿ ಎಂದು ಜನರಿಗೆ ತಿಳಿಸುತ್ತೇವೆ ಎಂದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *