ರಾಜ್ಯ ರಾಜಕೀಯ ಅಸಹ್ಯಕರವಾಗಿದೆ – ಪ್ರಮೋದ್ ಮುತಾಲಿಕ್

ಶ್ರೀರಾಮ ಸೇನೆ ರಾಜಕೀಯದಿಂದ ದೂರ ಸರಿದಿದ್ದು, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಅವರು ಹೊಲಸು ರಾಜಕಾರಣದಲ್ಲಿ ಪ್ರಾಮಾಣಿಕತೆ, ಹಿಂದುತ್ವಕ್ಕೆ ಜನ ಬೆಂಬಲ ಕೊಡುವುದಿಲ್ಲ. ಗೂಂಡಾಗಿರಿ ಮತ್ತು ದುಡ್ಡೇ ಮಾನದಂಡವಾಗಿದೆ ಎಂದು ವಿಷಾಧ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ನೂರಕ್ಕೆ ನೂರು ಒಳ್ಳೇ ಕೆಲಸ ಮಾಡ್ತಿದಾರೆ. ಆದ್ರೆ ಬಿಜೆಪಿ ಪಕ್ಷ ಇನ್ನೂ ಸುಧಾರಣೆ ಆಗಿಲ್ಲ. ರಾಜ್ಯ ರಾಜಕೀಯ ಅಸಹ್ಯಕರವಾಗಿದೆ. ಮೂರೂ ಪಕ್ಷ ಧಿಕ್ಕರಿಸಿ ಹೊಸ ಪಕ್ಷ ಮಾಡುವ ಅನಿವಾರ್ಯತೆಯಿದೆ. ಒಬ್ರು ಆಡಿಯೋ ಬಿಡುಗಡೆ ಮಾಡ್ತಾರೆ, ಮತ್ತೊಬ್ರು ನಾಳೆ ವಿಡಿಯೋ ಬಿಡುಗಡೆ ಮಾಡ್ತಾರಂತೆ. ವಿಡಿಯೋ ಇದ್ರೆ ಮೊದಲೇ ಯಾಕೆ ಬಿಡುಗಡೆ ಮಾಡಿಲ್ಲ? ಬಿಜೆಪಿ ಯವರು ಇನ್ನೂ ಮಾನನಷ್ಟ ಮೊಕದ್ದಮೆ ಯಾಕೆ ಹಾಕಿಲ್ಲ. ಸತ್ಯ ನಿಮ್ಮ ಪರವಾಗಿದ್ರೆ ನ್ಯಾಯಾಲಯಕ್ಕೆ ಹೋಗಿ ಎಂದು ಬಿಜೆಪಿಗೆ ಮುತಾಲಿಕ್ ಸವಾಲು ಹಾಕಿದ್ದಾರೆ.

ವ್ಯಾಲೆಂಟೈನ್ಸ್ ಡೇ ಆಚರಿಸಬೇಡಿ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ ಕರೆನೀಡಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಕ್ರಿಶ್ಚಿಯನ್ನರ ‘ಡೇ’ ಸಂಸ್ಕೃತಿ ನಮಗೆ ಬೇಡ. ಪ್ರೇಮಿಗಳ ದಿನಾಚರಣೆ ಬದಲು ತಂದೆ ತಾಯಿಯನ್ನು ಪೂಜಿಸಿ ಎಂದು ಯುವ ಜನತೆಯಲ್ಲಿ ಮನವಿ ಮಾಡಿದ್ದಾರೆ.

Facebook Comments

comments