KARNATAKA
ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಗೆ ಬಿಗ್ ಶಾಕ್, ತಂದೆಗೆ ಕೊರೊನಾ ಸೋಂಕು
ಬೆಂಗಳೂರು, ಜೂನ್ 21 : ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಕೊರೊನಾ ಶಾಕ್ ತಗಲಿದೆ. ಸಚಿವ ಸುಧಾಕರ್ ಅವರ ತಂದೆ ಕೇಶವ ರೆಡ್ಡಿ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಸಚಿವ ಸುಧಾಕರ್ ಮನೆಯಲ್ಲಿ ಅಡುಗೆ ಮಾಡುತ್ತಿದ್ದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟ ಬೆನ್ನಲ್ಲೇ ಸುಧಾಕರ್ ಅವರ ತಂದೆಗೆ ಅನಾರೋಗ್ಯ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಸುಧಾಕರ್ ತಂದೆ ಅವರನ್ನು ಕೊರೊನಾ ತಪಾಸಣೆಗೆ ಒಳಪಡಿಸಲಾಗಿತ್ತು. ಅಲ್ಲದೆ, ಆಸ್ಪತ್ರೆಗೂ ದಾಖಲು ಮಾಡಲಾಗಿತ್ತು. ಇದೀಗ ವರದಿ ಬಂದಿದ್ದು ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ.
ಇದೇ ವೇಳೆ ಸಚಿವ ಸುಧಾಕರ್ ತನ್ನ ತಂದೆಗೆ ಕೊರೊನಾ ದೃಢಪಟ್ಟಿರುವುದನ್ನು ಸ್ವತಃ ಟ್ವೀಟ್ ಮಾಡಿ ಹೇಳಿಕೊಂಡಿದ್ದಾರೆ. ಕುಟುಂಬಸ್ಥರನ್ನೂ ಕೊರೊನಾ ತಪಾಸಣೆಗೆ ಒಳಪಡಿಸಲಾಗಿದ್ದು, ವರದಿಗಾಗಿ ಕಾಯುತ್ತಿದ್ದೇನೆ ಎಂದು ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.