Connect with us

LATEST NEWS

ಸಾವಿರದ ಗಡಿ ದಾಟಿದ ಮಯನ್ಮಾರ್ ಭೂಕಂಪಕ್ಕೆ ಸಾವನಪ್ಪಿದವರ ಸಂಖ್ಯೆ

ಮಯನ್ಮಾರ್ ಮಾರ್ಚ್ 29:ಮಯನ್ಮಾರ್‌ನಲ್ಲಿ ಸಂಭವಿಸಿದ ಭಾರಿ ಭೂಕಂಪದಲ್ಲಿ ಸಾವನ್ನಪ್ಪಿದವರ ಸಂಖ್ಯೆ 1,002 ಕ್ಕೆ ಏರಿದೆ ಮತ್ತು 2,376 ಜನರು ಗಾಯಗೊಂಡಿದ್ದಾರೆ ಎಂದು ದೇಶದ ಆಡಳಿತಾರೂಢ ಜುಂಟಾ ಶನಿವಾರ ತಿಳಿಸಿದೆ.


ಶುಕ್ರವಾರ ಮಧ್ಯ ಮ್ಯಾನ್ಮಾರ್‌ನ ಸಾಗೈಂಗ್ ನಗರದ ವಾಯುವ್ಯಕ್ಕೆ 7.7 ತೀವ್ರತೆಯ ಆಳವಿಲ್ಲದ ಭೂಕಂಪ ಸಂಭವಿಸಿದ್ದು, ದೇಶದ ಹೆಚ್ಚಿನ ಭಾಗಗಳಲ್ಲಿ ಭಾರಿ ವಿನಾಶ ಸಂಭವಿಸಿದೆ. ಮಾರ್ಚ್​​​ 28ರಂದು ಮ್ಯಾನ್ಮಾರ್‌ನಲ್ಲಿ 7.7 ಮತ್ತು 6.4 ತೀವ್ರತೆಯ ಎರಡು ಸತತ ಭೂಕಂಪಗಳು ಸಂಭವಿಸಿದವು. ಇದೀಗ ಮತ್ತೆ ಮ್ಯಾನ್ಮಾರ್‌ನಲ್ಲಿ ಭೂಕಂಪ ಸಂಭವಿಸಿದೆ. ಮಧ್ಯ ರಾತ್ರಿ ಮತ್ತೆ ಭೂಕಂಪ ಸಂಭವಿಸಿದೆ. ಇದೀಗ ಒಟ್ಟು ಸಾವಿನ ಸಂಖ್ಯೆ 1002ಕ್ಕೆ ದಾಟಿದೆ. 2376 ಜನರು ಗಾಯಗೊಂಡಿದ್ದಾರೆ. ರಾಜಧಾನಿ ನೇಪಿಡಾವ್‌ನಲ್ಲಿರುವ ಆಸ್ಪತ್ರೆಯಿಂದ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಾಗುತ್ತಿದೆ.

ಸತ್ತವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿರುವ ಮ್ಯಾನ್ಮಾರ್ ಜುಂಟಾ ಮುಖ್ಯಸ್ಥ ಮಿನ್ ಆಂಗ್ ಹ್ಲೈಂಗ್, ‘ತುರ್ತು ಪರಿಸ್ಥಿತಿ’ ಘೋಷಿಸಿ ಸಹಾಯಕ್ಕಾಗಿ ಮನವಿ ಮಾಡಿದ್ದಾರೆ. ಇನ್ನು ನಮ್ಮ ಸಹಾಯಕ್ಕೆ ಬರುವಂತೆ ಬೇರೆ ಬೇರೆ ದೇಶಗಳಿಗೆ ಮನವಿ ಮಾಡಿಕೊಂಡಿದ್ದಾರೆ. ಇನ್ನು ಉತ್ತರ ಥೈಲ್ಯಾಂಡ್‌ನಲ್ಲೂ ಕಂಪನದ ಅನುಭವವಾಯಿತು, ಅಲ್ಲಿ ಕೆಲವು ಮೆಟ್ರೋ ಮತ್ತು ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಪ್ರಧಾನಿ ಪೇಟೊಂಗ್‌ಟಾರ್ನ್ ಶಿನವಾತ್ರ ಅವರು ತುರ್ತು ಪರಿಶೀಲನಾ ಸಭೆ ನಡೆಸಲು ಫುಕೆಟ್‌ಗೆ ಅಧಿಕೃತ ಭೇಟಿ ನೀಡಬೇಕಿತ್ತು ಅದನ್ನು ಕೂಡ ರದ್ದು ಮಾಡಿದ್ದಾರೆ. ಇದೀಗ ಥೈಲ್ಯಾಂಡ್‌ ನಗರದಲ್ಲಿ ‘ತುರ್ತು ಪರಿಸ್ಥಿತಿ’ ಘೋಷಿಸಿದ್ದಾರೆ.

Share Information
Continue Reading
Advertisement
1 Comment

1 Comment

    Leave a Reply

    Your email address will not be published. Required fields are marked *