KARNATAKA
ರೋಹಿಣಿ ಸಿಂಧೂರಿ ಚೀಪ್ ಮೆಂಟಾಲಿಟಿ ಇರುವ ಅಧಿಕಾರಿ – ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾದ ಶಿಲ್ಪಾ ನಾಗ್

ಮೈಸೂರು ಜೂನ್ 03: ಮೈಸೂರು ಜಿಲ್ಲೆಯಲ್ಲಿ ಈಗ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ದ ಐಎಎಸ್ ಅಧಿಕಾರಿಯೇ ತಿರುಗಿ ಬಿದ್ದಿದ್ದು, ರೋಹಿಣಿ ಸಿಂಧೂರಿ ಅವರ ಆಡಳಿತ ವೈಖರಿ ವಿರುದ್ದ ಆಕ್ರೋಶ ಹೊರ ಹಾಕಿರುವ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾದ ಶಿಲ್ಪಾ ನಾಗ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ತುರ್ತು ಸುದ್ದಿಗೋಷ್ಠಿ ನಡೆಸಿದ ಶಿಲ್ಪಾ ನಾಗ್, ‘ಇಂತಹ ಉಸಿರುಗಟ್ಟಿಸುವ ವಾತಾವರಣದಲ್ಲಿ ನನಗೆ ಕರ್ತವ್ಯ ನಿರ್ವಹಿಸಲು ಆಗುತ್ತಿಲ್ಲ. ಪಾಲಿಕೆ ಅಯುಕ್ತರ ಹುದ್ದೆಗೆ ಮಾತ್ರವಲ್ಲ, ಐಎಎಸ್ ಹುದ್ದೆಗೂ ರಾಜೀನಾಮೆ ನೀಡುತ್ತಿದ್ದೇನೆ. ರಾಜೀನಾಮೆ ಪತ್ರವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಕಳುಹಿಸುತ್ತೇನೆ’ ಸುದ್ದಿಗೋಷ್ಠಿಯಲ್ಲಿ ಕಣ್ಣೀರು ಹಾಕಿದರು.

ಜಿಲ್ಲಾಧಿಕಾರಿ ಅವರು ತುಂಬಾ ಚೀಪ್ ಮೆಂಟಾಲಿಟಿ ಇರುವ ಅಧಿಕಾರಿ, ಇಂತಹವರು ಮೈಸೂರಿನಂಥ ಜಿಲ್ಲೆಯಲ್ಲಿ ಇರಬಾರದು. ಅವರು ಏಕೆ ಈ ರೀತಿ ಹಠ ಮಾಡುತ್ತಿದ್ದಾರೋ ಗೊತ್ತಿಲ್ಲ, ನನ್ನ ಮೇಲೆ ದ್ವೇಷ ಇದ್ದರೆ ಸಾಧಿಸಲಿ. ನನ್ನ ವಿರುದ್ಧ ವೈಯಕ್ತಿಕ ದ್ವೇಷ ಇಟ್ಟುಕೊಂಡು ಮೈಸೂರು ನಗರ ಹಾಗೂ ಇಲ್ಲಿನ ಜನರನ್ನು ಬಲಿಪಶು ಮಾಡಬೇಡಿ’ ಎಂದರು.