KARNATAKA
ಮೈಸೂರು -ತಾಯಿ ಹೆಂಡತಿ ಮಗನಿಗೆ ವಿಷಕೊಟ್ಟು ತಾನು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಮೈಸೂರು ಫೆಬ್ರವರಿ 17: ಮೈಸೂರಿನಲ್ಲಿ ಧಾರುಣ ಘಟನೆಯೊಂದು ನಡೆದಿದ್ದು, ಒಂದೇ ಕುಟುಂಬದ ನಾಲ್ವರು ಅಪಾರ್ಟ್ ಮೆಂಟ್ ಒಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಮೃತರನ್ನು ಕುಶಾಲ್ (15ವ), ಚೇತನ್ (45ವ), ರೂಪಾಲಿ (43ವ), ಪ್ರಿಯಂವಧಾ (62ವ) ಎಂದು ಗುರುತಿಸಲಾಗಿದೆ. ಚೇತನ್ ಮೊದಲಿಗೆ ತಾಯಿ ಪ್ರಿಯಂವಧಾ, ಪತ್ನಿ ರೂಪಾಲಿ ಮತ್ತು ಮಗ ಕುಶಾಲ್ಗೆ ವಿಷವುಣಿಸಿ ಸಾಯಿಸಿ ನಂತರ ತಾನು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಡಿಸಿಪಿ ಜಾಹ್ನವಿ, ವಿದ್ಯಾರಣ್ಯಪುರಂ ಇನ್ಸ್ಪೆಕ್ಟರ್ ಮೋಹಿತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
