Connect with us

  KARNATAKA

  ಮೈಸೂರು ದಸರಾ 2023 : ಚಿನ್ನದ ಅಂಬಾರಿ ಹೊರುತ್ತಿರುವ ಅಭಿಮನ್ಯು ಸೇರಿ 9 ಆನೆಗಳಿಗೆ ಅರಣ್ಯ ಸಚಿವರಿಂದ ಪೂಜೆ..!

  ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ ಮೈಸೂರು ದಸರಾ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುತ್ತಿರುವ ಅಭಿಮನ್ಯು ಸೇರಿ 9 ಆನೆಗಳಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಗಜ ಪಯಣಕ್ಕೆ ಚಾಲನೆ ನೀಡಿದರು.

  ಮೈಸೂರು : ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ ಮೈಸೂರು ದಸರಾ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುತ್ತಿರುವ ಅಭಿಮನ್ಯು ಸೇರಿ 9 ಆನೆಗಳಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಗಜ ಪಯಣಕ್ಕೆ ಚಾಲನೆ ನೀಡಿದರು.


  ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಮಾತನಾಡಿ , ‘ಗಜಪಯಣಕ್ಕೆ ಅರಣ್ಯ ಸಚಿವನಾಗಿ ವಿದ್ಯುಕ್ತವಾಗಿ ಚಾಲನೆ ನೀಡಲು ಸಂತಸ ವಾಗುತ್ತಿದೆ.

  ಆನೆಗಳ ಮೊದಲ ತಂಡದಲ್ಲಿ ಅಭಿಮನ್ಯು ಸೇರಿದಂತೆ 9 ಆನೆಗಳನ್ನು ಇಲಾಖೆ ಆಯ್ಕೆ ಮಾಡಿತ್ತು. ಅದರಲ್ಲಿ ಪಾರ್ಥಸಾರಥಿಗೆ ಮದ ಬಂದ ಕಾರಣ ಕಂಜನ್ ಆನೆ ಇದೇ ಮೊದಲ ಬಾರಿ ದಸರೆಯಲ್ಲಿ ಪಾಲ್ಗೊಳ್ಳುವ ಅವಕಾಶ ಸಿಕ್ಕಿದೆ.

  ಉಳಿದ ಆನೆಗಳಿಗೆ ಹಿಂದಿನ ದಸರೆಯಲ್ಲಿ ಪಾಲ್ಗೊಂಡ ಅನುಭವವಿದೆ’ ಎಂದರು.’15 ದಿನದ ನಂತರ ಗಜಪಡೆಯ ಎರಡನೇ ತಂಡವು ಮೈಸೂರಿಗೆ ಆಗಮಿಸಲಿದೆ. ಒಂದೂವರೆ ತಿಂಗಳು ಜಂಬೂಸವಾರಿ ತಾಲೀಮಿನಲ್ಲಿ ಪಾಲ್ಗೊಳ್ಳಲಿವೆ.

  ನಿಶಾನೆ ಆನೆಯಾಗಿ ಯಾವುದನ್ನು ಇನ್ನೂ ಆಯ್ಕೆ ಮಾಡಿಲ್ಲ.

  ತಾಲೀಮಿನ ನಂತರ ನಿರ್ಧರಿಸಲಾಗುವುದು’ ಎಂದು ತಿಳಿಸಿದರು. ‘ಎಲ್ಲ ಆನೆಗಳು ಆರೋಗ್ಯವಾಗಿದ್ದು, ಪಶುವೈದ್ಯರು, ಮಾವುತರು, ಕಾವಾಡಿಗರು ಆರೈಕೆ ಮಾಡಲಿದ್ದಾರೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

  ‘ದಸರೆ ಈ ಬಾರಿ ಅತ್ಯಂತ ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸಲು ಸಿದ್ದರಾಮಯ್ಯ ನೇತೃತ್ವದ ನಮ್ಮ ಸರ್ಕಾರ ಬದ್ಧವಾಗಿದ್ದು, ಎಲ್ಲ ಸಿದ್ಧತೆಗಳು ನಡೆದಿವೆ.

  ನಾಡದೇವತೆ ಚಾಮುಂಡೇಶ್ವರಿ ಆಶೀರ್ವಾದ ನಾಡಿನ ಜನರ ಮೇಲಿದೆ. ಒಳ್ಳೆಯ ಮಳೆ ಬೆಳೆ ಆಗಲಿ ಎಂಬುದು ಪ್ರಾರ್ಥನೆಯಾಗಿದೆ’ ಎಂದರು.

  Share Information
  Advertisement
  Click to comment

  You must be logged in to post a comment Login

  Leave a Reply