Connect with us

KARNATAKA

ಮೈಸೂರು ಪೊಲೀಸರ ಕಾರ್ಯಾಚರಣೆ ; ಕೇರಳಕ್ಕೆ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಜಾನುವಾರುಗಳ ರಕ್ಷಣೆ

ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಮೈಸೂರಿನಿಂದ ಕೇರಳಕ್ಕೆ ಅಕ್ರಮವಾಗಿ ಸಾಗಾಟವಾಗುತ್ತಿದ್ದ ಜಾನುವಾರುಗಳನ್ನು ಮೈಸೂರು ಪೊಲೀಸರು ರಕ್ಷಣೆ ಮಾಡಿದ್ದಾರೆ,

ಮೈಸೂರು : ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಮೈಸೂರಿನಿಂದ ಕೇರಳಕ್ಕೆ ಅಕ್ರಮವಾಗಿ ಸಾಗಾಟವಾಗುತ್ತಿದ್ದ ಜಾನುವಾರುಗಳನ್ನು ಮೈಸೂರು ಪೊಲೀಸರು ರಕ್ಷಣೆ ಮಾಡಿದ್ದಾರೆ,

100ಕ್ಕೂ ಹೆಚ್ಚು ದನಕರುಗಳನ್ನು ಮೈಸೂರು ಪೊಲೀಸರು ರಕ್ಷಿಸಿ ಗೋ ಆಶ್ರಯ ತಾಣಕ್ಕೆ ರವಾನಿಸಿದ್ದಾರೆ .

ಮೈಸೂರಿನಿಂದ ಕೇರಳಕ್ಕೆ ಜಾನುವಾರುಗಳನ್ನು ಸಾಗಿಸಲು ಆರೋಪಿಗಳು ಪ್ಲಾನ್ ಮಾಡಿಕೊಂಡಿದ್ದರು,

ಪ್ಲಾನ್‌ನಂತೆ ಮೈಸೂರಿನಿಂದ ಹೊರಟ ಗೊಕಳ್ಳರನ್ನು ಎಚ್‌ಡಿಕೋಟೆ ತಾಲೂಕು ಅಂತರಸಂತೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಲಾರಿಯಲ್ಲಿ ಗೋವುಗಳನ್ನು ಸಾಗಿಸುತ್ತಿದ್ದಾಗ ಸ್ಥಳೀಯರಿಗೆ ಅನುಮಾನ ಬಂದಿದೆ, ಕೂಡಲೇ ಸ್ಥಳಿಯರು ಪೊಲೀಸರಿಗೆ ಕರೆ ಮಾಡಿದ್ದಾರೆ.

ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಗೋಕಳ್ಳರನ್ನು ಹೆಡೆಮುರಿ ಕಟ್ಟಿದ್ದಾರೆ.

2 ಕಂಟೈನರ್ ಹಾಗೂ 5 ಬೊಲೆರೋ ವಾಹನಗಳಲ್ಲಿ ಜಾನುವಾರುಗಳನ್ನು ಕೇರಳಕ್ಕೆ ಸಾಗಿಸುತ್ತಿದ್ದರು ಎಂದು ತಿಳಿದು ಬಂದಿದೆ,

ರಸ್ತೆ ಮಧ್ಯೆ ಬ್ಯಾರಿಕೇಡ್ ಗಳನ್ನು ಅಳವಡಿಸಿ ಪೊಲೀಸರು ದಾಳಿ ನಡೆಸಿದ್ದಾರೆ.

ಈ ವೇಳೆ ಆರೋಪಿಗಳು ಪರಾರಿ ಆಗಲು ಯತ್ನಿಸಿದ್ದಾರೆ.

ಬ್ಯಾರಿಕೇಡ್ ಗಳನ್ನು ಭೇಧಿಸಿ ವಾಹನ ಚಲಾಯಿಸಿಕೊಂಡು ಎಸ್ಕೇಪ್ ಆಗಲು ಯತ್ನಿಸಿದಾಗ ಪೊಲೀಸರು ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ಘಟನೆ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಉಳಿದವರು ಪರಾರಿಯಾಗಿದ್ದಾರೆ.

ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಈ ಎಲ್ಲಾ ರಾಸುಗಳನ್ನು ಕೇರಳಕ್ಕೆ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.

ಹಸು, ಎಮ್ಮೆ, ಕರುಗಳು ಸೇರಿದಂತೆ ನೂರಾರು ರಾಸುಗಳನ್ನು ರಕ್ಷಿಸಲಾಗಿದೆ.

ರಕ್ಷಿಸಲಾದ ರಾಸುಗಳನ್ನು ಪ್ರಾಣಿಗಳ ಆಶ್ರಯ ತಾಣಕ್ಕೆ ರವಾನಿಸಲಾಗಿದೆ.

ಅಂತರಸಂತೆ ಠಾಣೆ ಪೊಲೀಸರು ಬಂಧಿತ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದ್ದು, ಪರಾರಿಯಾಗಿರುವ ಉಳಿದ ಆರೋಪಿಗಳ ಬಂಧನಕ್ಕೆ ಜಾಲ ಬೀಸಿದ್ದಾರೆ.

Share Information
Advertisement
Click to comment

You must be logged in to post a comment Login

Leave a Reply