LATEST NEWS
ಫ್ರೀ ಕಾಶ್ಮೀರ ಫಲಕ ಪ್ರದರ್ಶನ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ ಪೊಲೀಸರು
ಫ್ರೀ ಕಾಶ್ಮೀರ ಫಲಕ ಪ್ರದರ್ಶನ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ ಪೊಲೀಸರು
ಮೈಸೂರು ಜನವರಿ 9: ಇಲ್ಲಿನ ಮೈಸೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ಬುಧವಾರ ನಡೆದ ಪ್ರತಿಭಟನಾ ಸಮಯದಲ್ಲಿ ಫ್ರೀ ಕಾಶ್ಮೀರ ಫಲಕ ಪ್ರದರ್ಶಿಸಿದ ಕುರಿತು ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಆಯೋಜಕ ಮೈಸೂರು ವಿಶ್ವವಿದ್ಯಾನಿಲಯ ಸಂಶೋಧಕರ ಸಂಘದ ಅಧ್ಯಕ್ಷ ಮರಿದೇವಯ್ಯ ಅವರ ಮೇಲೆ ಜಯಲಕ್ಷ್ಮಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಆವರಣದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ, ಬಹುಜನ ವಿದ್ಯಾರ್ಥಿ ಸಂಘ, ಎಸ್ ಎಫ್ ಐ, ಎಐಡಿಎಸ್ ಒ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟಗಳು ಪಂಜಿನ ಮೆರವಣಿಗೆ ಆಯೋಜಿಸಿದ್ದವು.
ಈ ವೇಳೆ ಮೈಸೂರು ವಿವಿ ಹಳೆ ವಿಧ್ಯಾರ್ಥಿನಿಯೊಬ್ಬಳು ಫ್ರೀ ಕಾಶ್ಮೀರ ಎಂದು ಫಲಕ ಪ್ರದರ್ಶನ ಮಾಡಿದ್ದಳು. ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯ ಪೋಟೋ ವೈರಲ್ ಆಗಿದ್ದು, ಆಕೆ ಮೂರು ವರ್ಷಗಳ ಹಿಂದೆ ವಿವಿಯಲ್ಲಿ ಪತ್ರಿಕೋದ್ಯಮ ವಿಧ್ಯಾರ್ಥಿ ಆಗಿ ಸ್ನಾತಕೊತ್ತರ ಪದವಿ ಪಡೆದಿರುವ ವಿಧ್ಯಾರ್ಥಿನಿ ಎಂದು ತಿಳಿದು ಬಂದಿದೆ. ಈಕೆ ತನ್ನ ಫೇಸ್ ಬುಕ್ ನಲ್ಲಿ ಜೆಎನ್ ಯೂ ಬಗ್ಗೆ ಸಾಕಷ್ಟು ವಿಷಯಗಳನ್ನು ಪೋಸ್ಟ್ ಮಾಡಿದ್ದಳು ಎಂದು ತಿಳಿದು ಬಂದಿದೆ.