Connect with us

LATEST NEWS

ಪಶ್ಚಿಮಬಂಗಾಳ – ಅಂತ್ಯಕ್ರಿಯೆಗೆ ಸ್ಮಶಾನಕ್ಕೆ ತೆರಳುತ್ತಿದ್ದ ಸಂದರ್ಭ ಅಪಘಾತ – 18 ಮಂದಿ ಸಾವು

ಪಶ್ಚಿಮಬಂಗಾಳ : ಶವವನ್ನು ಮಸಣಕ್ಕೆ ತೆಗೆದುಕೊಂಡು ಹೋಗುತ್ತಿದ್ದ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ 18 ಮಂದಿ ಸಾವನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ನಾದಿಯಾ ಜಿಲ್ಲೆಯಲ್ಲಿ ಶನಿವಾರ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ.


ಈ ದುರ್ಘಟನೆಯಲ್ಲಿ 18 ಮಂದಿ ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಹೊತ್ತೊಯ್ಯುತ್ತಿದ್ದ ಮೆಟಡಾರ್ ವಾಹನದಲ್ಲಿ ಸುಮಾರು 20 ಜನರು ಇದ್ದರು. ಉತ್ತರ 24 ಪರಗಣದ ಬಾಗ್ಡಾದಿಂದ ನವದ್ವೀಪದ ಸ್ಮಶಾನದ ಕಡೆಗೆ ತೆರಳುತ್ತಿದ್ದಾಗ ದಾರಿ ಮಧ್ಯೆ ಟ್ರಕ್‌ಗೆ ಮೆಟಾಡರ್‌ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ದುರ್ಘಟನೆ ಸಂಭವಿಸಿದೆ.

ಇನ್ನು ಮೆಟಡಾರ್ ವಾಹನದಲ್ಲಿ ಪ್ರಯಾಣಿಸುತ್ತಿದ್ದ 20 ಮಂದಿಯಲ್ಲಿ 18 ಜನರು ಸಾವನ್ನಪ್ಪಿದ್ದು ಅದರಲ್ಲಿ 10 ಪುರುಷರು, ಏಳು ಮಹಿಳೆಯರು ಮತ್ತು ಒಬ್ಬಳು ಆರುವರ್ಷದ ಬಾಲಕಿ ಇದ್ದಾಳೆ.

Advertisement
Click to comment

You must be logged in to post a comment Login

Leave a Reply