FILM
ನಟಿ ಸಮಂತಾ ಮಾಜಿ ಪತಿ ನಾಗ ಚೈತನ್ಯ ಜೊತೆ ಶೋಭಿತಾ ಎಂಗೇಜ್ ಮೆಂಟ್
ಹೈದರಾಬಾದ್ಯ ಅಗಸ್ಟ್ 08: ತೆಲುಗು ಚಿತ್ರರಂಗದ ಖ್ಯಾತ ನಟ ನಾಗ ಚೈತನ್ಯ ತಮ್ಮ ಎರಡನೆ ಇನ್ಸಿಂಗ್ ಆರಂಭಿಸಿದ್ದಾರೆ. ನಟಿ ಸಮಂತಾ ಜೊತೆ ಡೈವೋರ್ಸ್ ಬಳಿಕ ಇದೀಗ ಮಾಜಿ ಪತಿ ನಟ ನಾಗ ಚೈತನ್ಯ ಎರಡನೇ ಮದುವೆಯಾಗಲು ಮುಂದಾಗಿದ್ದಾರೆ.ಇಂದೇ ನಿಶ್ಚಿತಾರ್ಥ ಮಾಡಿಕೊಳ್ಳಲಿದೆ ಎನ್ನಲಾಗಿದೆ.
ಕೆಲವು ವರ್ಷಗಳ ಹಿಂದೆ ಸಮಂತಾ ರುತ್ ಪ್ರಭು ಅವರಿಗೆ ವಿಚ್ಛೇದನ ನೀಡಿದ ನಾಗ ಚೈತನ್ಯ, ಶೋಭಿತಾ ಜೊತೆ ಡೇಟಿಂಗ್ ಮಾಡುತ್ತಿರುವ ಸುದ್ದಿ ಸಖತ್ ವೈರಲ್ ಆಗಿತ್ತು. ಅವರಿಬ್ಬರೂ ತಮ್ಮ ಸಂಬಂಧವನ್ನು ಸಾರ್ವಜನಿಕವಾಗಿ ದೃಢೀಕರಿಸದಿದ್ದರೂ, ಜೋಡಿಯು ಆಗಾಗ ಒಟ್ಟಿಗೆ ಕಾಣಿಸಿಕೊಳ್ಳುತ್ತಿತ್ತು.
2021ರ ಅಕ್ಟೋಬರ್ ತಿಂಗಳಲ್ಲಿ ನಾಗ ಚೈತನ್ಯ ಹಾಗೂ ಸಮಂತಾ ಬೇರೆ ಆಗುವ ಬಗ್ಗೆ ಘೋಷಣೆ ಮಾಡಿದರು. ಇದಕ್ಕೆ ಕಾರಣ ಏನು ಎಂಬುದನ್ನು ಯಾರೂ ರಿವೀಲ್ ಮಾಡಿಲ್ಲ. ಆ ಬಳಿಕ ನಾಗ ಚೈತನ್ಯ ಅವರು ಶೋಭಿತಾ ಜೊತೆ ಡೇಟಿಂಗ್ ಆರಂಭಿಸಿದರು. ಆದರೆ ಈ ಬಗ್ಗೆ ಜೋಡಿ ಎಲ್ಲಿಯೂ ಬಹಿರಂಗ ಪಡಿಸಿರಲಿಲ್ಲ. ಈ ಹಿಂದೆ ನಾಗಚೈತನ್ಯ ಜ್ಯೂಬಿಲಿ ಹಿಲ್ಸ್ ನಲ್ಲಿ ಖರೀದಿಸಿದ್ದ 15 ಕೋಟಿ ರು ಬಂಗಲೆಯಲ್ಲಿ ಶೋಭಿತಾ ಕಾಣಿಸಿಕೊಂಡಿದ್ದರು ಇದೀಗ ಈ ಜೋಡಿ ಮದುವೆಯಾಗುತ್ತಿದೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ. ಮತ್ತೊಂದು ಕುತೂಹಲಕಾರಿ ವಿವರವೆಂದರೆ ನಾಗಾ ಚೈತನ್ಯ ಅವರ ತಂದೆ ನಾಗಾರ್ಜುನ ಅವರು ಮದುವೆಯ ಬಗ್ಗೆ ಸ್ಪಷ್ಟನೆ ಕೊಡಲಿದ್ದಾರೆ ಎನ್ನಲಾಗಿದೆ.
You must be logged in to post a comment Login