Connect with us

    LATEST NEWS

    ನಾಗಾಲ್ಯಾಂಡ್ – ಸೇನಾ ಕಾರ್ಯಾಚರಣೆಯಲ್ಲಿ 13 ನಾಗರಿಕರ ಸಾವು …ಹೊಣೆ ಹೊತ್ತುಕೊಂಡ ಸೇನೆ….!!

    ನಾಗಾಲ್ಯಾಂಡ್ : ಕಲ್ಲಿದ್ದಲು ಗಣಿಯಲ್ಲಿ ಕೆಲಸ ಮುಗಿಸಿ ತೆರಳುತ್ತಿದ್ದ ಕಾರ್ಮಿಕರ ಮೇಲೆ ಭಯೋತ್ಪಾದಕರೆಂದು ತಪ್ಪಾಗಿ ತಿಳಿದು ಭಾರತೀಯ ಸೇನಾ ಯೋಧರು ಗುಂಡಿನ ದಾಳಿ ನಡೆಸಿದ್ದು, 13 ಮಂದಿ ಸಾವನಪ್ಪಿದ್ದಾರೆ. ನಾಗಲ್ಯಾಂಡ್ ನ ಮೊನ್ ಜಿಲ್ಲೆಯಲ್ಲಿ ನಾಗರಿಕರ ಹತ್ಯೆಯ ಹೊಣೆಯನ್ನು ಭಾರತೀಯ ಸೇನೆ ಹೊತ್ತುಕೊಂಡಿದೆ. ದಂಗೆಕೋರರ ಚಲನವಲನದ ಖಚಿತ ಮಾಹಿತಿ ಗುಪ್ತಚರ ಇಲಾಖೆಯಿಂದ ಪಡೆದ ನಂತರ, ತಿರು, ಮೊನ್ ಜಿಲ್ಲೆ, ನಾಗಾಲ್ಯಾಂಡ್ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ನಡೆಸಲು ಯೋಜಿಸಲಾಯಿತು.


    ಈ ಘಟನೆ ನಡೆದುದಕ್ಕೆ ವಿಷಾದವಿದೆ. ನಾಗರಿಕರ ಸಾವಿದೆ ಕಾರಣ ಪತ್ತೆಹಚ್ಚಲು ಉನ್ನತ ಮಟ್ಟದಲ್ಲಿ ತನಿಖೆ ನಡೆಸಲಾಗುತ್ತಿದ್ದು, ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ನಾಗಲ್ಯಾಂಡ್ ನ ಡಿಮಪುರ್ ಮೂಲದ 3 ಕಾರ್ಪ್ಸ್ ಹೇಳಿಕೆಯಲ್ಲಿ ತಿಳಿಸಿದೆ.
    ಶನಿವಾರ ಸಂಜೆ ಈ ಘಟನೆ ನಡೆದಿದ್ದು ಸಂತ್ರಸ್ತರು ಕಲ್ಲಿದ್ದಲು ಗಣಿಯಿಂದ ಕೆಲಸ ಮುಗಿಸಿ ಟ್ರಕ್ ನಲ್ಲಿ ವಾಪಸ್ಸಾಗುತ್ತಿದ್ದರು. ದೈನಂದಿನ ವೇತನ ಪಡೆಯುತ್ತಿದ್ದ ಕಾರ್ಮಿಕರಾಗಿದ್ದ ಇವರು ವಾರಾಂತ್ಯಗಳಲ್ಲಿ ಮಾತ್ರ ಮನೆಗೆ ಬರುತ್ತಿದ್ದರು. ಅಂತೆಯೇ ಶನಿವಾರದಂದು ಮನೆಗೆ ವಾಪಸ್ಸಾಗುತ್ತಿದ್ದರು. ಈ ವೇಳೆ ಅವರನ್ನು ಭಯೋತ್ಪಾದಕರೆಂದು ಭಾವಿಸಿ ಪ್ಯಾರಾ ಕಮಾಂಡೋಗಳು ದಾಳಿ ನಡೆಸಿದ್ದಾರೆ.


    ಮೃತರು ಕೊನ್ಯಾಕ್ (ಬುಡಕಟ್ಟು) ಸಮುದಾಯದವರಾಗಿದ್ದು, ಘಟನೆಯಲ್ಲಿ ಸ್ಥಳದಲ್ಲೇ 6 ಮಂದಿ ಸಾವನ್ನಪ್ಪಿದ್ದರೆ, ಚಿಕಿತ್ಸೆ ಪಡೆಯುತ್ತಿದ್ದ 7 ಮಂದಿ ಭಾನುವಾರ ಬೆಳಿಗ್ಗೆ ಸಾವನ್ನಪ್ಪಿದ್ದಾರೆ. 11 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಬುಡಕಟ್ಟು ನಾಯಕ ಹೇಳಿದ್ದಾರೆ..

    Share Information
    Advertisement
    Click to comment

    You must be logged in to post a comment Login

    Leave a Reply