Connect with us

    LATEST NEWS

    ಬಿಜೆಪಿ ಕಾರ್ಯಕರ್ತರಿಗೆ ಹೊಡೆಸಿದ್ದು ನಳಿನ್ ಹಾಗೂ ಕಲ್ಲಡ್ಕ್ ಪ್ರಭಾಕರ್ ಭಟ್ – ಅಭಯ್ ಚಂದ್ರ ಜೈನ್

    ಮಂಗಳೂರು ಮೇ 19: ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಹೊಡೆಸಿದ್ದಕ್ಕೆ ನಳಿನ್ ಕುಮಾರ್ ಮತ್ತು ಕಲ್ಲಡ್ಕ ಭಟ್ಟರು ಕಾರಣ. ಲೋಕಸಭೆ ಸದಸ್ಯನಾಗಿ ಪೊಲೀಸರಿಗೆ ಹೇಳಿ ಕಾರ್ಯಕರ್ತರ ಹೊಡೆಸಿದ್ದಾರಂದ್ರೆ ಏನರ್ಥ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಪ್ರಶ್ನೆ ಮಾಡಿದ್ದಾರೆ.


    ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು ಈ ಘಟನೆಗೆ ನೇರ ಕಾರಣ ಕಲ್ಲಡ್ಕ ಪ್ರಭಾಕರ್ ಭಟ್ ಮತ್ತು ನಳಿನ್ ಕುಮಾರ್ ಕಟೀಲ್ ಕಾರಣ. ಸಿದ್ದರಾಮಯ್ಯ ನಾಳೆ ಅಧಿಕಾರ ಸ್ವೀಕಾರ ಮಾಡಬೇಕು. ಆದರೆ ಕಲ್ಲಡ್ಕ ಭಟ್ ಈ ಘಟನೆಗೆ ಕಾಂಗ್ರೆಸ್ ಕಾರಣ ಅಂತಾ ಹೇಳುತ್ತಾರೆ. ಕಟೀಲ್ ಲೋಕಸಭಾ ಸದಸ್ಯನಾಗಿ ಕಾರ್ಯಕರ್ತರಿಗೆ ಸಾಯುವ ಹಾಗೆ ಹೊಡಿಸ್ತಾರೆ ಅಂದ್ರೆ ಅವರಿಗೆ ಮಾನವೀಯತೆ ಇದ್ಯಾ ಎಂದು ಜೈನ್ ಪ್ರಶ್ನಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply