Connect with us

  LATEST NEWS

  ಯಾರೂ ಕರೆಂಟ್ ಬಿಲ್ ಕಟ್ಬೇಡಿ – ನಳಿನ್ ಕುಮಾರ್ ಕಟೀಲ್

  ಮಂಗಳೂರು ಜೂನ್ 11: ರಾಜ್ಯದ ಯಾರೊಬ್ಬರೂ ವಿದ್ಯುತ್ ಬಿಲ್ ಪಾವತಿ ಮಾಡಬೇಡಿ, ವಿದ್ಯುತ್ ಸಂಪರ್ಕ ಕಡಿತಗೊಂಡರೆ ನಾವು ನಿಮ್ಮ ಬೆಂಬಲಕ್ಕೆ ನಿಲ್ಲುತ್ತೇವೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕರೆ ನೀಡಿದ್ದಾರೆ.


  ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಲವಾರು ಷರತ್ತುಗಳನ್ನು ಮುಂದಿಟ್ಟಿದ್ದು, ಚುನಾವಣೆ ಸಂದರ್ಭದಲ್ಲಿ ಘೋಷಿಸಿದ ಭರವಸೆಗಳನ್ನು ಜಾರಿಗೊಳಿಸುವಲ್ಲಿ ವಿಫಲವಾಗಿದೆ. ‘ಉಚಿತ ವಿದ್ಯುತ್‌ ಭರವಸೆ ಸುಳ್ಳಾಗಿದ್ದು, ಜನರು ಬಿಲ್‌ ಕಟ್ಟಬಾರದು, ವಿದ್ಯುತ್‌ ಸಂಪರ್ಕ ಕಡಿತಗೊಳಿಸಿದರೆ ಬಿಜೆಪಿ ಜನರ ಪರ ನಿಂತು ಪ್ರತಿಭಟನೆ ನಡೆಸಲಿದೆ ಎಂದು ಹೇಳಿದ್ದಾರೆ.

  ಯೋಜಿತವಲ್ಲದ ಗ್ಯಾರಂಟಿ ಯೋಜನೆಗಳಿಂದ ಲಾಭ ಪಡೆಯಲು ಜನರು ಇನ್ನೂ ಕಾಯುತ್ತಿದ್ದಾರೆ. ಗೃಹ ಲಕ್ಷ್ಮಿ ಯೋಜನೆಯು ಸೊಸೆ ಮತ್ತು ಅತ್ತೆಯ ನಡುವೆ ಜಗಳಕ್ಕೆ ಕಾರಣವಾಗಿದೆ. ಎಲ್ಲರಿಗೂ ಎಲ್ಲಾ ಯೋಜನೆಗಳು ಉಚಿತ ಎಂದು ಹೇಳಿದ ಸಿದ್ದರಾಮಯ್ಯ ಈಗ ಷರತ್ತುಗಳನ್ನು ವಿಧಿಸುತ್ತಿದ್ದಾರೆ. ಯೋಜನೆಗೆ ಹೊಸ ಮಾರ್ಗಸೂಚಿಗಳನ್ನು ತರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

  Share Information
  Advertisement
  Click to comment

  You must be logged in to post a comment Login

  Leave a Reply