ಹಳೆಯಂಗಡಿಯಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಮತ ಯಾಚನೆ

ಮಂಗಳೂರು ಏಪ್ರಿಲ್ 11: ದಕ್ಷಿಣಕನ್ನಡ ಜಿಲ್ಲೆಯ ಲೋಕಸಭಾ ಚುನಾವಣೆ ಪ್ರಚಾರ ಭರದಿಂದ ಸಾಗುತ್ತಿದ್ದು, ಎರಡೂ ಪಕ್ಷಗಳ ಅಭ್ಯರ್ಥಿಗಳು ಜಿಲ್ಲೆಯಲ್ಲಿ ಮನೆ ಮನೆ ಪ್ರಚಾರದಲ್ಲಿ ನಿರತರಾಗಿದ್ದಾರೆ.

ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ಇಂದು ಹಳೆಯಂಗಡಿಯಲ್ಲಿ ಮತ ಯಾಚಿಸಿದರು. ಈ ಸಂದರ್ಭದಲ್ಲಿ ಮುಲ್ಕಿ-ಮೂಡಬಿದ್ರೆ ಶಾಸಕರಾದ ಶ್ರೀ ಉಮಾನಾಥ ಕೋಟ್ಯಾನ್, ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀ ಈಶ್ವರ ಕಟೀಲ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ರವಿಶಂಕರ್ ಮಿಜಾರ್, ಕಸ್ತೂರಿ ಪಂಜ, ದೇವಿ ಪ್ರಸಾದ್ ಪುನರೂರು, ಸುಕೇಶ್ ಶೆಟ್ಟಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

VIDEO

10 Shares

Facebook Comments

comments