Connect with us

LATEST NEWS

ನಾಮಪತ್ರ ಸಲ್ಲಿಸಿದ ನಳಿನ್ ಕುಮಾರ್ ಕಟೀಲ್

ನಾಮಪತ್ರ ಸಲ್ಲಿಸಿದ ನಳಿನ್ ಕುಮಾರ್ ಕಟೀಲ್

ಮಂಗಳೂರು, ಮಾರ್ಚ್ 25: ಇಂದು ಭಾರತೀಯ ಜನತಾ ಪಕ್ಷದಿಂದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ನಳಿನ್ ಕುಮಾರ್ ಕಟೀಲ್ ಅವರು ಜಿಲ್ಲಾ ಚುನಾವಣಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ನಾಮಪತ್ರ ಸಲ್ಲಿಸಿದರು.

ಬಿಜೆಪಿ ಚುನಾವಣಾ ಕಚೇರಿಯಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಿದ ಬಳಿಕ ಬಿಜೆಪಿ ಹಿರಿಯ ಮುಖಂಡರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಕಟೀಲ್ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾದ ಸಸಿಕಾತ್ ಸೆಂಥಿಲ್ ಅವರಿಗೆ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸುವ ವೇಳೆ  ಬಿಜೆಪಿ ಹಿರಿಯ ನಾಯಕರಾದ ಮೋನಪ್ಪ ಭಂಡಾರಿ, ಶಾಸಕರಾದ ಸುನೀಲ್ ಕುಮಾರ್, ಸಂಜೀವ ಮಠಂದೂರು,ಮತ್ತು  ಪುರುಷೋತ್ತಮಭಟ್ ಉಪಸ್ಥಿತರಿದ್ದರು.

Facebook Comments

comments