Connect with us

LATEST NEWS

ಸಿಎಂ ಬದಲಾವಣೆ ಕುರಿತ ಯಾವುದೇ ಸಂದೇಶ ಹೈಕಮಾಂಡ್ ನಿಂದ ಬಂದಿಲ್ಲ – ನಳಿನ್ ಕುಮಾರ್ ಕಟೀಲ್

ಉಡುಪಿ ಜುಲೈ 25: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಯಾವುದೇ ಸೂಚನೆ ಸಂದೇಶ ಹೈಕಮಾಂಡ್‌ನಿಂದ ಬಂದಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ಹೇಳಿದರು.


ಭಾನುವಾರ ಪರ್ಕಳದಲ್ಲಿ ಹಡಿಲುಭೂಮಿ ಕೃಷಿ ಆಂದೋಲನದಲ್ಲಿ ಭಾಗವಹಿಸಿ ಮಾತನಾಡಿದ ಅವರು ನಾನು ಕೇವಲ ಮಾಧ್ಯಮಗಳಿಂದ ಈ ವಿಚಾರ ತಿಳಿದುಕೊಂಡಿದ್ದೇನೆ. ಈ ಬಗ್ಗೆ ನನಗೆ ಹೇಳಲು ಏನೂ ಇಲ್ಲ ಎಂದರು. ಕೆಸರುಗದ್ದೆಯಲ್ಲಿ ಟ್ರ್ಯಾಕ್ಟರ್ ಓಡಿಸಿದ್ದೇನೆ. ರಾಜ್ಯದ ಟ್ರ್ಯಾಕ್ಟರ್ ಈಗ ಯಡಿಯೂರಪ್ಪ ಬಿಡುತ್ತಿದ್ದಾರೆ ಎಂದರು.


ಈಚೆಗೆ ಜಾಲತಾಣಗಳಲ್ಲಿ ಹರಿದಾಡಿದ ಆಡಿಯೋ ವಿರುದ್ಧ ಠಾಣೆಗೆ ದೂರು ನೀಡಲಾಗಿದ್ದು, ತನಿಖೆ ನಡೆಯುತ್ತಿದೆ. ಆಡಿಯೋ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ’ ಎಂದರು. ಮೊಟ್ಟೆ ಟೆಂಡರ್‌ ಅವ್ಯವಹಾರದಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಭಾಗಿಯಾಗಿರುವ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿದೆ. ಇದರ ಸತ್ಯಾಸತ್ಯತೆಯನ್ನು ಪರಿಶೀಲಿಸಿ, ಪೂರ್ಣ ಮಾಹಿತಿ ಪಡೆದು ಮುಂದಿನ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ನಳಿನ್ ಹೇಳಿದರು.

 

Advertisement Advertisement
Click to comment

You must be logged in to post a comment Login

Leave a Reply