Connect with us

    LATEST NEWS

    ಯಾರು ಅಪಶಕುನ ಎನ್ನುವುದು ಈಗ ಕಾಂಗ್ರೆಸ್ ನಾಯಕರಿಗೆ ಅರಿವಾಗಿರಬಹುದು – ನಳಿನ್ ಕುಮಾರ್ ಕಟೀಲ್

    ಮಂಗಳೂರು ಡಿಸೆಂಬರ್ 03: ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಬಂದಿದ್ದು, ಇದೀಗ ಯಾರು ಅಪಶಕುನ ಎನ್ನುವುದು ಈಗ ಕಾಂಗ್ರೆಸ್ ನಾಯಕರಿಗೆ ಅರಿವಾಗಿರಬಹುದು’ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಗಿ ಹೇಳಿದರು.


    ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪಂಚ ರಾಜ್ಯಗಳ ಚುನಾವಣೆ ಸೆಮಿಫೈನಲ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ ಹಲವು ಕಾಂಗ್ರೆಸ್ ನಾಯಕರು ಹೇಳಿದ್ದರು. ಆದರೆ ಕಾಂಗ್ರೆಸ್‌ ಫೈನಲ್ ಪ್ರವೇಶಿಸಲು ವಿಫಲವಾಗಿದೆ ಎನ್ನುವುದನ್ನು ಈ ಫಲಿತಾಂಶ ದೃಢಪಡಿಸಿದೆ’ ಎಂದರು.

    ವಿಧಾನಸಭಾ ಚುನಾವಣೆ ನಡೆದ ಮೂರು ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದಿದೆ. ಮೋದಿ ಅವರ ನಾಯಕತ್ವದಲ್ಲಿ ಜನ ವಿಶ್ವಾಸವಿಟ್ಟಿದ್ದಾರೆ ಎನ್ನುವುದು ಮತ್ತೆ ಸಾಬೀತಾಗಿದೆ. ಲೋಕಸಭೆ ಚುನಾವಣೆಯಲ್ಲಿ ‌ಬಿಜೆಪಿ ಮತ್ತೆ ಜಯಭೇರಿ ಬಾರಿಸಲು ಈ ಮೂರು ರಾಜ್ಯಗಳಲ್ಲಿ ಸಿಕ್ಕಿರುವ ಗೆಲುವು ಹೆಚ್ಚಿನ ಶಕ್ತಿ ನೀಡಲಿದೆ. ವಿರೋಧ ಪಕ್ಷಗಳ ಅನುಕೂಲಕರ ಮೈತ್ರಿಯನ್ನು ಜನತೆ ತಿರಸ್ಕರಿಸಿದ್ದಾರೆ. ಮೋದಿ ಅವರು ಮತ್ತೆ ಪ್ರಧಾನಿ ಆಗುವುದನ್ನು ತಡೆಯಲು ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ’ ಎಂದು ನಳಿನ್ ತಿಳಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply