Connect with us

LATEST NEWS

ಡ್ರಗ್ಸ್ ಜಾಲವನ್ನು ಬುಡಸಮೇತ ಕಿತ್ತು ಹಾಕದೆ ವಿರಮಿಸಲ್ಲ: ಕಟೀಲ್

ಬೆಂಗಳೂರು: ಡ್ರಗ್ಸ್ ಜಾಲವನ್ನು ಬುಡಸಮೇತ ಕಿತ್ತು ಹಾಕದೇ ವಿರಮಿಸುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶಪಥ ಮಾಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನಮ್ಮ ಪಕ್ಷದಿಂದ ಹಮ್ಮಿಕೊಂಡಿರುವ ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನದ ಮೂಲಕ ಡ್ರಗ್ಸ್ ಜಾಲವನ್ನು ಬುಡಸಮೇತ ಕಿತ್ತು ಹಾಕುವ ತನಕ ವಿರಮಿಸುವ ಪ್ರಶ್ನೆನೇ ಇಲ್ಲ ಎಂದಿದ್ದಾರೆ.

ಡ್ರಗ್ಸ್ ಜಾಲವನ್ನು ಕೊನೆಗಾಣಿಸಲು ಪೊಲೀಸ್ ಇಲಾಖೆಯ ಕರ್ತವ್ಯದಲ್ಲಿ ಅವರಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಲಾಗುವುದು ಎಂದು ಗೃಹಸಚಿವರ ಹೇಳಿಕೆಯನ್ನು ನಮ್ಮ ಕಾರ್ಯಕರ್ತರು, ಪ್ರಜ್ಞಾವಂತ ನಾಗರಿಕರು ಸ್ವಾಗತಿಸಿದ್ದಾರೆ. ಎಷ್ಟೇ ಪ್ರಭಾವಿ ವ್ಯಕ್ತಿಯಾದರೂ ಈ ನೆಲದ ಕಾನೂನನ್ನು ಮುರಿದರೆ ಕ್ಷಮಿಸಲು ಸಾಧ್ಯವೇ ಇಲ್ಲ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.

Facebook Comments

comments