LATEST NEWS
ಬಹಿರಂಗ ಹೇಳಿಕೆ ನೀಡುವವರ ವಿರುದ್ಧ ಶಿಸ್ತು ಕ್ರಮ : ನಳಿನ್ ವಾರ್ನಿಂಗ್…!!

ಮಂಗಳೂರು ಜೂನ್ 27: ಬಿಜೆಪಿಯಲ್ಲಿ ನಡೆಯುತ್ತಿರುವ ಒಳಜಗಳಕ್ಕೆ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಎಚ್ಚರಿಕೆ ನೀಡಿದ್ದು, , ಪಕ್ಷದ ಶಿಸ್ತು ಮೀರಿ ಯಾರು ಕೂಡ ಯಾವುದೇ ಹೇಳಿಕೆಗಳನ್ನು ನೀಡಬಾರದು. ಪಕ್ಷದ ಸೂಚನೆ ಮೀರಿ ಯಾರಾದರೂ ಹೇಳಿಕೆ ಕೊಟ್ಟರೆ ಶಿಸ್ತು ಕ್ರಮ ಕೈಗೊಳ್ಳುತ್ತೇವೆ ಮುಖಂಡರಿಗೆ ವಾರ್ನಿಂಗ್ ಕೊಟ್ಟಿದ್ದಾರೆ.
ಬಿಜೆಪಿ ನಾಯಕತ್ವ ವಿರುದ್ಧ ಪಕ್ಷದ ನಾಯಕರಿಂದಲೇ ಅಪಸ್ವರ ಕುರಿತ ಪ್ರಶ್ನೆಗೆ ನಗರದಲ್ಲಿ ಪ್ರತಿಕ್ರಿಯಿಸಿದ ನಳಿನ್ ಕುಮಾರ್, ಚುನಾವಣೆಯಲ್ಲಿ ಬಿಜೆಪಿ ಸೋತ ಬಳಿಕ ರಾಜ್ಯ ಪ್ರವಾಸ ಕೈಗೊಂಡಿದ್ದೇನೆ. ಎಲ್ಲಿಯೂ ಗಲಾಟೆಗಳು ಆಗಿಲ್ಲ. ಎಲ್ಲ ಕಾರ್ಯಕರ್ತರು ಲೋಕಸಭಾ ಚುನಾವಣೆಗೆ ತಯಾರಿ ಮಾಡುತ್ತಿದ್ದಾರೆ. ಆದರೂ ಕೆಲವರು ಹೇಳಿಕೆಗಳನ್ನು ಕೊಡುತ್ತಿದ್ದಾರೆ. ನಿನ್ನೆಯೇ ಈ ಬಗ್ಗೆ ಎಲ್ಲ ಹಿರಿಯರಲ್ಲಿ ಮಾತನಾಡಿದ್ದೇನೆ. ಇವತ್ತಿನಿಂದ ಯಾರೂ ಯಾವುದೇ ಹೇಳಿಕೆಗಳನ್ನು ನೀಡಬಾರದೆಂದು ಸೂಚಿಸಿದ್ದೇನೆ ಎಂದರು.

ಅತಿರೇಕದ ಹೇಳಿಕೆ ಕೊಡುವ ಎಲ್ಲರಿಗೂ ನೋಟಿಸ್ ನೀಡಲಾಗುತ್ತದೆ. ಮತ್ತೆ ಪಕ್ಷವನ್ನು ಲೋಕಸಭಾ ಚುನಾವಣೆಗೆ ತಯಾರಿ ಮಾಡಿಸಬೇಕು. ಲೋಕಸಭಾ ಚುನಾವಣೆ ಗೆಲ್ಲುವುದೇ ಗುರಿಯಾಗಬೇಕು. ಈಗಾಗಲೇ ಬೂತ್ ಗಟ್ಟಿ ಮಾಡಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರೇ ಕಾರ್ಯಕರ್ತರೊಡನೆ ಸಂವಾದ ಮಾಡಿದ್ದಾರೆ. ನಮ್ಮ ಜವಾಬ್ದಾರಿ ಜಾಸ್ತಿ ಇದೆ. ಕಾರ್ಯಕರ್ತರು ಬಹಳ ಉತ್ಸಾಹ ಮತ್ತು ಪ್ರೇರಣೆಯಿಂದ ಲೋಕಸಭಾ ಚುನಾವಣೆಗೆ ತಯಾರಿ ಮಾಡುತ್ತಿದ್ದಾರೆ ಎಂದು ಹೇಳಿದರು.