LATEST NEWS
ಶಾಲೆ ನಿಯಮ ಒಪ್ಪದಿದ್ದರೆ ಬೇರೆ ದಾರಿ ನೋಡಿಕೊಳ್ಳಲಿ – ಸಂಸದ ನಳಿನ್ ಕುಮಾರ್ ಕಟೀಲ್

ಮಂಗಳೂರು ಫೆಬ್ರವರಿ 05: ಶಾಲೆಯ ನಿಯಮಗಳನ್ನು ಒಪ್ಪದಿದ್ದರೆ ವಿಧ್ಯಾರ್ಥಿಗಳು ಬೇರೆ ದಾರಿ ನೋಡಿಕೊಳ್ಳಲಿ ಎಂದು ಸಂಸದ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಹೇಳಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದು, ಹಿಜಾಬ್‌ನಂತಹ ವಿವಾದಕ್ಕೆ ಆಸ್ಪದವಿಲ್ಲ. ಶಾಲೆ ಸರಸ್ವತಿಯ ದೇಗುಲ. ಶಾಲೆ ನಿಯಮದ ಜೊತೆಗೆ ಕಲಿಯುವುದು ವಿದ್ಯಾರ್ಥಿಗಳ ಧರ್ಮ. ಅದರೊಟ್ಟಿಗೆ ಧರ್ಮ ಬೆರೆಸುವುದು ಸರಿಯಲ್ಲ. ಕರಾವಳಿಯನ್ನು ತಾಲಿಬಾನ್ ಮಾಡಲು ಬಿಡುವುದಿಲ್ಲ. ಟಿಪ್ಪು ಜಯಂತಿ, ಶಾದಿಭಾಗ್ಯದಂತಹ ಯೋಜನೆಗಳ ರೂವಾರಿ ಸಿದ್ದರಾಮಯ್ಯ, ಹಿಜಾಬ್ ಬಗ್ಗೆ ಮಾತನಾಡುತ್ತಿದ್ದಾರೆ. ಅವರ ಕಾಲದಲ್ಲಿ ಸಾಮರಸ್ಯ ಕದಡುವ ಎಷ್ಟು ಘಟನೆಗಳು ನಡೆದಿವೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದರು.
