LATEST NEWS
ಮಂಗಳೂರಿನಲ್ಲಿ ಉಗ್ರ ಸಂಘಟನೆ ಬೆಂಬಲಿಸಿ ಬರಹ – ದೇಶದ್ರೋಹಿಗಳ ವಿರುದ್ದ ಕಠಿಣ ಕ್ರಮ – ನಳಿನ್

ಉಡುಪಿ ನವೆಂಬರ್ 27: ಮಂಗಳೂರಿನಲ್ಲಿ ಉಗ್ರ ಸಂಘಟನೆ ಬೆಂಬಲಿಸಿ ಗೋಡೆ ಬರಹ ವಿಚಾರ, ರಾಷ್ಟ್ರ ವಿರೋಧಿ ಘೋಷಣೆ ಯಾರೇ ಹಾಕಿದ್ರು ಅವರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಂಗಳೂರಿನಲ್ಲಿ ರಾಷ್ಟ್ರ ವಿರೋಧಿ ಘೋಷಣೆ, ಬರಹ ಕುರಿತಂತೆ ಅದನ್ನು ಯಾರೇ ಹಾಕಿದ್ದರೂ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು, ಇನ್ನು ರಾಜ್ಯದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ವಿರುದ್ಧ ರಾಜ್ಯದಲ್ಲೂ ಕಠಿಣ ಕಾನೂನು ಕ್ರಮ ಜಾರಿಗೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಚಿವ ಸಂಪುಟ ಈ ನಿಟ್ಟಿನಲ್ಲಿ ಶೀಘ್ರವೇ ತೀರ್ಮಾನ ಕೈಗೊಳ್ಳಲಿದೆ ಎಂದರು.
