KARNATAKA
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜಿನಾಮೆ….!!
ಬಳ್ಳಾರಿ ಜೂನ್ 24:ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹೀನಾಯ ಸೋಲಿನ ಹೊಣೆಹೊತ್ತು, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಸೋಲಿನ ಬಳಿಕ ನೈತಿಕ ಹೊಣೆ ಹೊತ್ತು ಲಿಖಿತ ಮತ್ತು ಮೌಖಿಕವಾಗಿ ನಾನು ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದರು. ನನ್ನ ಅವಧಿ ಮುಗಿದಿದ್ದು, ಸಹಜವಾಗಿ ಬದಲಾವಣೆ ನಡೆಯುತ್ತದೆ. ಎರಡು ಅವಧಿ ನಾನು ಪೂರ್ಣಗೊಳಿಸಿದೆ. ಅನಿರೀಕ್ಷಿತ ಫಲಿತಾಂಶದಿಂದ ಒಂದಷ್ಟು ಕಾರ್ಯಕರ್ತರನ್ನು ಮತ್ತೊಮ್ಮೆ ಗಟ್ಟಿಗೊಳಿಸಬೇಕಿದೆ ಎಂದರು.
You must be logged in to post a comment Login