Connect with us

MANGALORE

ಕೊರೊನಾ ರೋಗಿ ಅಂತ್ಯ ಸಂಸ್ಕಾರದಲ್ಲಿ ಅನ್ಯವ್ಯಕ್ತಿಗಳು ಹಾಜರಿದ್ದರೆ ಕೇಸು ದಾಖಲಿಸಿ – ನಳಿನ್

ಮಂಗಳೂರು, ಜೂ 30: ಕೊರೊನಾ ರೋಗಿಯ ಶವಸಂಸ್ಕಾರ ಸಂದರ್ಭ ಅನ್ಯ ವ್ಯಕ್ತಿಗಳು ಹಾಜರಿದ್ದರೆ ಅವರ ವಿರುದ್ದ ಕೇಸು ದಾಖಲಿಸಲು ಸಂಸದ ನಳಿನ್ ಕುಮಾರ್ ಕಟೀಲ್ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್-19 ಪ್ರಗತಿ ಪರಿಶೀಲನೆ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು ಕೊರೊನಾ ರೋಗಿಗಳ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಳವಾಗುತ್ತಿರುವುದರಿಂದ ವೆನ್‍ಲಾಕ್ ಸಾಮರ್ಥ್ಯ ಮೀರುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಖಾಸಗೀ ಆಸ್ಪತ್ರೆಗಳಲ್ಲೂ ಹೆಚ್ಚುವರಿ ಬೆಡ್‍ಗಳನ್ನು ಕಾದಿರಿಸುವಂತೆ ಸಂಸದ ನಳಿನ್ ಕುಮಾರ್ ಕಟೀಲ್ ಆರೋಗ್ಯ ಇಲಾಖೆಗೆ ತಿಳಿಸಿದ್ದಾರೆ.

ಕೊರೊನಾ ರೋಗಿಯ ಶವಸಂಸ್ಕಾರವನ್ನು ಮಾಡುವಾಗ ಸರ್ಕಾರದ ಮಾರ್ಗಸೂಚಿಯಂತೆ ಪಿ.ಪಿ.ಟಿ ಕಿಟ್ ಧರಿಸಿರುವ, ಸಂಬಂಧಪಟ್ಟ ಸಿಬ್ಬಂದಿಗಳು ಮಾತ್ರ ಪಾಲ್ಗೊಳ್ಳಬೇಕು. ಅನ್ಯ ವ್ಯಕ್ತಿಗಳಿಗೆ ಅಲ್ಲಿ ಹಾಜರಿರಲು ಅವಕಾಶ ನೀಡಬಾರದು, ಅಂತವರ ವಿರುದ್ಧ ಕೇಸು ದಾಖಲಿಸಲು ನಳಿನ್ ಕುಮಾರ್ ಕಟೀಲು ಸೂಚಿಸಿದರು.

Facebook Comments

comments