LATEST NEWS
ಆರ್ ಎಸ್ಎಸ್ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೇಸ್ ಸುಟ್ಟು ಬೂದಿಯಾಗುತ್ತದೆ – ನಳಿನ್ ಕುಮಾರ್ ಕಟೀಲ್
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಮಂಗಳೂರು ಮೇ 26: ಆರ್ ಎಸ್ ಎಸ್ ಮತ್ತು ಭಜರಂಗದಳದ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಸರ್ವನಾಶ ಖಂಡಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗುಡುಗಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು ಪ್ರಿಯಾಂಕ್ ಖರ್ಗೆ ಬಾಯಿಗೆ ಹಿಡಿತ ಇಟ್ಟುಕೊಂಡು, ನಾಲಿಗೆ ಹಿಡಿತದಲ್ಲಿ ಮಾತನಾಡಲಿ. ಭಜರಂಗದಳ, ಆರ್.ಎಸ್.ಎಸ್ ನಿಷೇಧ ಮಾಡಲು ನಿಮಗೆ ಹಕ್ಕಿಲ್ಲ. ಪಿಎಫ್ಐ ಅನ್ನ ನಾವು ನಿಷೇಧ ಮಾಡಿದ್ದೇವೆ, ಇವರೇನು ನಿಷೇಧ ಮಾಡೋದು? ಎಂದು ಪ್ರಶ್ನಿಸಿದ್ದಾರೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
ನೆಹರೂ ಆರ್ ಎಸ್ಎಸ್ ನಿಷೇಧಕ್ಕೆ ಕೈ ಹಾಕಿ ಸುಟ್ಟುಕೊಂಡಿದ್ದಾರೆ, ಭಜರಂಗದಳ, ಆರ್ಎಸ್ಎಸ್ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಇರಲ್ಲ, ಸಿದ್ದರಾಮಯ್ಯ ರಾಜಕೀಯ ಮುಗಿಯುತ್ತೆ. ಸಿದ್ದರಾಮಯ್ಯ ಮತ್ತು ಪ್ರಿಯಾಂಕ್ ಖರ್ಗೆಗೆ ತಾಕತ್ ಇದ್ದರೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರನ್ನ ಬಂಧಿಸಿ. ನಿಮ್ಮ ಮೆರವಣಿಗೆ, ವಿಜಯೋತ್ಸವ, ಸಭೆಗಳಲ್ಲೇ ಪಾಕಿಸ್ತಾನ ಪರ ಘೋಷಣೆ ಬಂದಿದೆ. ಅದು ಬಿಟ್ಟು ರಾಜ್ಯವನ್ನ ವಿಭಜನಾವಾದದ ಮೂಲಕ ಕಟ್ಟೋದು ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೇಸ್ ತನ್ನ ಗ್ಯಾರಂಟಿಗಳನ್ನು ಮೊದಲು ಜಾರಿ ಮಾಡಲಿ, ಯಾರೂ ಕರೆಂಟ್ ಬಿಲ್ ಕಟ್ಟಬೇಡಿ ಅಂತ ನಾನೇ ಹೇಳ್ತೆನೆ ಎಂದರು.
You must be logged in to post a comment Login