LATEST NEWS
ಹಸ್ತದೊಳಗೆ ಹಸ್ತದ ಅಪರೇಷನ್ ಆಗುತ್ತಿದೆ – ನಳಿನ್ ಕುಮಾರ್ ಕಟೀಲ್
ಮಂಗಳೂರು ನವೆಂಬರ್ 21: ಕಾಂಗ್ರೇಸ್ ಪಕ್ಷದಲ್ಲಿ ಆಂತರಿಕ ಗೊಂದಲ ಜಾಸ್ತಿಯಾಗಿದ್ದು, ಹಸ್ತದೊಳಗೆ ಹಸ್ತದ ಅಪರೇಷನ್ ಆಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು ಸಿಎಂ ಹುದ್ದೆಗೆ ಹತ್ತಾರು ಟವಲ್ಗಳು ಬಿದ್ದಿವೆ. ಜಾರಕಿಹೊಳಿ, ಪರಮೇಶ್ವರ್ ಜೊತೆಗೆ ದಲಿತ ಸಿಎಂ ಕಾರ್ಡ್ಗಳೂ ಉರುಳುತ್ತಿವೆ ಎಂದರು. ಇನ್ನು ಕೆಲವೇ ದಿನಗಳಲ್ಲಿ 30 – 40 ಶಾಸಕರು ಕಾಂಗ್ರೆಸ್ ನಿಂದ ಹೊರಗೆ ಬರುತ್ತಾರೆ. ಈ ಭಯದಿಂದ ಕಾಂಗ್ರೆಸ್ನವರು ಬಿಜೆಪಿಯಿಂದ ಬರುತ್ತಿದ್ದಾರೆ ಎಂದು ಹೇಳುವ ಮೂಲಕ ದಾರಿ ತಪ್ಪಿಸುತ್ತಿದ್ದಾರೆ. ಆದರೆ, ಯಾವುದೇ ಕಾರಣಕ್ಕೂ ಬಿಜೆಪಿಯಿಂದ ಯಾರೂ ಹೋಗುತ್ತಿಲ್ಲ. ಬೆಳಗಾವಿ ಅಧಿವೇಶನ ಮುಗಿದ ತಕ್ಷಣ ಕಾಂಗ್ರೆಸ್ನಲ್ಲಿ ದೊಡ್ಡ ಪರಿವರ್ತನೆಯಾಗುತ್ತದೆ ಎಂದರು.
ಮೋದಿ ಸರ್ಕಾರ ಕೊಟ್ಟ ಅನುದಾನದಲ್ಲಿ ರಾಜ್ಯದಲ್ಲಿ ಕೆಲಸ ಆಗ್ತಿದೆ. ರಾಜ್ಯದಿಂದ ಒಂದು ರೂಪಾಯಿ ಕೂಡ ಬಿಡುಗಡೆಯಾಗಿಲ್ಲ. ಈ ಸರ್ಕಾರ ಭ್ರಷ್ಟಾಚಾರದ ಸರ್ಕಾರ. ಅಧಿಕಾರಿಗಳ ಸಂಬಳ ಕೊಡಲು ಕೂಡ ಹಣವಿಲ್ಲ. ಮೂರ್ನಾಲ್ಕು ತಿಂಗಳು ಕಾದು ನೋಡಿ, ಎಲ್ಲವೂ ಗೊತ್ತಾಗಲಿದೆ ಎಂದು ಹೇಳಿದರು.
You must be logged in to post a comment Login