Connect with us

DAKSHINA KANNADA

ಕಡಬ – ಸರಕಾರಿ ಶಾಲೆಯಲ್ಲೇ ವಿಧ್ಯಾರ್ಥಿಗಳ ನಮಾಜ್ – ವಿಡಿಯೋ ವೈರಲ್

ಮಂಗಳೂರು : ರಾಜ್ಯದಲ್ಲಿ ಹಿಜಾಬ್ ವಿವಾದ ಜೀವಂತವಾಗಿರುವಾಗಲೇ, ಸರಕಾರಿ ಶಾಲೆಯೊಂದರಲ್ಲಿ ಮಕ್ಕಳು ನಮಾಜ್ ಮಾಡಿದ ಘಟನೆ ಬೆಳಕಿಗೆ ಬಂದಿದೆ.


ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಅಂಕತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 6 ನೇ ಮತ್ತು 7 ನೇ ತರಗತಿಯ ವಿದ್ಯಾರ್ಥಿಗಳು ಕಳೆದ‌ ಮೂರು ವಾರಗಳಿಂದ ಪ್ರತೀ ಶುಕ್ರವಾರ ಈ ವಿದ್ಯಾರ್ಥಿಗಳು ಶಾಲಾ ಕೊಠಡಿಯಲ್ಲೇ ನಮಾಜ್ ಮಾಡುತ್ತಿದ್ದ ಬಗ್ಗೆ ಮಾಹಿತಿ ದೊರೆತಿದೆ.

ಮಕ್ಕಳು ನಮಾಜ್ ಮಾಡುತ್ತಿರುವ ದೃಶ್ಯವನ್ನು ಮೊಬೈಲ್ ನಲ್ಲಿ ಸರೆಹಿಡಿಯಲಾಗಿದ್ದು,ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಐದು ಮಂದಿ ವಿದ್ಯಾರ್ಥಿಗಳು ನಮಾಜ್ ಮಾಡಿದ್ದು, ಇದೀಗ ಆ ಬಗ್ಗೆ ಆಕ್ಷೇಪ ವ್ಯಕ್ತವಾಗಲಾರಂಭಿಸಿದೆ.
ಕಳೆದ ಮೂರು ವಾರಗಳಿಂದ ಶಾಲಾ ಕೊಠಡಿಯಲ್ಲಿ ಈ ವಿದ್ಯಾರ್ಥಿ ಗಳು ನಮಾಜ್ ಮಾಡುತ್ತಿದ್ದಾರೆ ಎನ್ನಲಾಗಿದ್ದು , ಶಾಲಾ ಸಿಬ್ಬಂದಿ ಯಾವುದೇ ಕ್ರಮಕೈ ಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ.

Advertisement
Click to comment

You must be logged in to post a comment Login

Leave a Reply