DAKSHINA KANNADA
ಲೋಕಸಭೆಯಲ್ಲಿ ‘ನಾರಿ ಶಕ್ತಿ ವಂದನಾ ಅಧಿನಿಯಮ’ ಮಸೂದೆ ಮಂಡನೆ- ಮಂಗಳೂರಿನಲ್ಲಿ ಬಿಜೆಪಿ ಸಂಭ್ರಮಾಚರಣೆ

ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ನೀಡುವ ‘ನಾರಿ ಶಕ್ತಿ ವಂದನಾ ಅಧಿನಿಯಮ’ ಮಸೂದೆ ಮಂಡನೆ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿ ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.
ಮಂಗಳೂರು : ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ನೀಡುವ ‘ನಾರಿ ಶಕ್ತಿ ವಂದನಾ ಅಧಿನಿಯಮ’ ಮಸೂದೆ ಮಂಡನೆ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿ ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

ನಗರದ ಬಂಟ್ಸ್ ಹಾಸ್ಟೆಲ್ ಚುನಾವಣಾ ಕಚೇರಿ ಬಳಿ ನಡೆದ ಸಂಭ್ರಮಾಚರಣೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಮುಖಂಡರುಗಳಾದ ಈಶ್ವರ್ ಕಟೀಲ್, ರವಿಶಂಕರ್ ಮಿಜಾರ್, ಸತೀಶ್ ಕುಂಪಲ, ಸಂತೋಷ್ ಬೋಳಿಯಾರ್, ಮಹಿಳಾ ನಾಯಕರುಗಳು, ಪಾಲಿಕೆ ಸದಸ್ಯರುಗಳು ಪಾಲ್ಗೊಂಡಿದ್ದರು.
ಈ ಸಂದರ್ಭ ಸಿಹಿ ಹಂಚಿ ಮುಖಂಡರುಗಳು ಮತ್ತು ಕಾರ್ಯಕರ್ತರು ಸಂಭ್ರಮಿಸಿದರು.
ಈ ಸಂದರ್ಭ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷರು ಭಾರತದಲ್ಲಿ ಮಹಿಳೆಯರಿಗೆ ವಿಶೇಷ ಗೌರವವಿದ್ದು ಇದಕ್ಕೆ ಪೂರಕವಾಗಿ ಮಹಿಳೆಯರು ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ಪ್ರಾಬಲ್ಯ ಹೊಂದಿದ್ದಾರೆ. ರಾಜಕೀಯವಾಗಿಯೂ ಮಹಿಳೆಯರು ಮುಂದೆ ಬರಬೇಕೆನ್ನುವ ದೃಷ್ಟಿಯಿಂದ ಬಿಜೆಪಿ ಕಳೆದ ಅನೇಕ ವರ್ಷಗಳಿಂದ ಹೋರಾಟ ಮಾಡುತ್ತಿದ್ದು ಇದೀಗ ಈ ಕನಸನ್ನು ಪ್ರಧಾನಿ ಮೋದಿ ನನಸು ಮಾಡಿದ್ದಾರೆ ಎಂದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಕಸ್ತೂರಿ ಪಂಜ ಮಾತನಾಡಿ ದೇಶದಲ್ಲಿ ರಾಜಕೀಯವಾಗಿ ಮಹಿಳೆಯರು ಮುಂದೆ ಬರಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರ ಆಶಾಯವಾಗಿದ್ದು ಈ ನಿಟ್ಟಿನಲ್ಲಿ ರಾಜ್ಯ ವಿಧಾನ ಸಭೆ ಮತ್ತು ಲೋಕಸಭೆಯಲ್ಲಿ ಶೇಕಡ 33 ರಷ್ಟು ಮೀಸಲಾತಿ ನೀಡಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮುಂದೆ ಬಂದಿರುವುದು ಮಹಿಳೆಯರಿಗೆ ಶಕ್ತಿ ನೀಡಿದಂತಾಗಿದ್ದು ಪ್ರಧಾನಿ ಮೋದಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.