Connect with us

    DAKSHINA KANNADA

    ನರಿಮೊಗರು ಗ್ರಾಮದ ಬಳಿ ಬೈಕ್, ಕಾರು ಮಧ್ಯೆ ಭೀಕರ ಅಪಘಾತ ಬೈಕ್ ಸವಾರರಿಬ್ಬರು ಮೃತ್ಯು

    ಪುತ್ತೂರು: ನರಿಮೊಗರು ಶಾಲಾ ಬಳಿ ಆ.30 ರಂದು ರಾತ್ರಿ ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರೂ ದಾರುಣ ಸಾವಿಗೀಡಾದ ಘಟನೆ ವರದಿಯಾಗಿದೆ.

    ಕುರಿಯ ಗ್ರಾಮದ ಇಡಬೆಟ್ಟು ಸಮೀಪದ ಕಟ್ಟದಬೈಲು ನಿವಾಸಿ ಐತ್ತಪ್ಪ ಎಂಬವರ ಮಗ ಮಿಥುನ್(18ವ.) ಹಾಗೂ ಐತ್ತಪ್ಪ ಅವರ ಸಹೋದರ, ಮೆಸ್ಕಾಂ ಪವರ್‌ಮ್ಯಾನ್ ಉಮೇಶ್ ಎಂಬವರ ಮಗ ಭವಿತ್ (19ವ.) ಮೃತಪಟ್ಟವರು.
    ಅವರು ಬರುತ್ತಿದ್ದ ಬೈಕ್ ಮತ್ತು ಕಾರಿನ ಮಧ್ಯೆ ಅಪಘಾತವಾಗಿದೆ.ತಲೆಗೆ ತೀವ್ರ ಗಾಯಗೊಂಡಿದ್ದ ಸವಾರರೀರ್ವರೂ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.ವೀರಮಂಗಲ ಸಮೀಪ ನಡೆದ ಮದುವೆ ಮೆಹಂದಿ ಕಾರ್ಯಕ್ರಮವೊಂದಕ್ಕೆ ಮಿಥುನ್, ಭವಿತ್ ಸಹೋದರರು ಬೈಕ್‌ನಲ್ಲಿ ಹೋಗಿ ಬರುತ್ತಿದ್ದ ವೇಳೆ ಘಟನೆ ನಡೆದಿದೆ.ಮೃತ ಮಿಥುನ್ ಅವರು ನರಿಮೊಗ್ರು ಐಟಿಐ ವಿದ್ಯಾರ್ಥಿಯಾಗಿದ್ದರೆ, ಭವಿತ್ ಅವರು ಸೆಂಟ್ರಿಂಗ್, ಬಾವಿಗೆ ರಿಂಗ್ ಅಳವಡಿಸುವ ವೃತ್ತಿ ನಿರ್ವಹಿಸುತ್ತಿದ್ದರು ಎಂದು ಮಾಹಿತಿ ಲಭಿಸಿದೆ.
    ಅಪಘಾತಕ್ಕೀಡಾಗಿ ರಸ್ತೆ ಮಧ್ಯೆ ಬಿದ್ದಿದ್ದ ಸವಾರರಿಬ್ಬರನ್ನು ಅದೇ ರಸ್ತೆಯಾಗಿ ಹೋಗುತ್ತಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಗಣೇಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ ಅವರು ತನ್ನ ಕಾರಿನಲ್ಲಿ ಕರೆತಂದು ಪುತ್ತೂರು ಆದರ್ಶ ಆಸ್ಪತ್ರೆಗೆ ದಾಖಲಿಸಿದ್ದರು.ಆದರೆ ತಲೆಗೆ ಗಂಭೀರ ಗಾಯಗೊಂಡಿದ್ದ ಸವಾರರೀರ್ವರೂ ಸಾವಿಗೀಡಾಗಿದ್ದಾರೆ.ಮೃತದೇಹಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.ಸ್ಥಳಕ್ಕೆ ಗ್ರಾಮಾಂತರ ಠಾಣೆಯ ಸಂಪ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply