Connect with us

DAKSHINA KANNADA

ನಾರ್ಶ ಉದ್ಯಮಿ ಮನೆಯಲ್ಲಿ ನಕಲಿ ಇಡಿ ಅಧಿಕಾರಿಗಳ ದರೋಡೆ – ಅಂತರಾಜ್ಯ ದರೋಡೆಕೋರ ಅರೆಸ್ಟ್

ವಿಟ್ಲ ಜನವರಿ 23: ವಿಟ್ಲ ಬೋಳಂತೂರಿನ‌ ಉದ್ಯಮಿಯ ಮನೆಯಲ್ಲಿ ಇ ಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಅಂತರಾಜ್ಯ ದರೋಡೆಕೋರನ ದಕ್ಷಿಣಕನ್ನಡ ಪೊಲೀಸರು ಅರೆಸ್ಟ್ ಮಾಡಿದ್ದಾರೆ.


ಬಂಧಿತನನ್ನು ಕೇರಳದ ಕೊಲ್ಲಂ ನಿವಾಸಿ ಅನಿಲ್‌ ಫರ್ನಾಂಡಿಸ್‌ ಎಂದು ಗುರುತಿಸಲಾಗಿದೆ. ಬಂಧಿತನಿಂದ ಕೃತ್ಯಕ್ಕೆ ಉಪಯೋಗಿಸಿದ KL-02-BP-1104ನೇ ನೊಂದಣಿ ಎರ್ಟಿಗಾ ಕಾರು, 5,00,000/-ರೂ ನಗದು ಹಾಗೂ ನಕಲಿ ಕೃತ್ಯ ನಡೆಸುವಾಗ ಕಾರಿಗೆ ಅಳವಡಿಸಿದ್ದ ನಕಲಿ TN-20-DB-5517ನೇ ನಂಬರ ಪ್ಲೇಟ್‌ನ್ನು ವಶಪಡಿಸಿಕೊಂಡಿದ್ದು, ಸ್ವಾದೀನಪಡಿಸಿಕೊಂಡ ನಗದು ಹಾಗೂ ವಾಹನದ ಒಟ್ಟು ಮೌಲ್ಯ- 11,00,000/- ರೂ ಆಗಿದೆ.
ಜನವರಿ 3 ರಂದು ರಾತ್ರಿ ಬಂಟ್ವಾಳ ತಾಲೂಕು ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯ ಬೋಳಂತೂರು ನಾರ್ಶ ಎಂಬಲ್ಲಿ, ಉದ್ಯಮಿಯೊಬ್ಬರ ಮನೆಗೆ 06 ಜನ ಅಪರಿಚಿತರು ಇ ಡಿ ಅಧಿಕಾರಿಗಳೆಂದು ನಂಬಿಸಿ, ಮನೆಯ ಶೋಧನೆ ನಡೆಸಿ, ಸುಮಾರು 30 ಲಕ್ಷ ನಗದನ್ನು ದರೋಡೆ ಮಾಡಿ ಪರಾರಿಯಾಗಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಪತ್ತೆಗಾಗಿ ನಾಲ್ಕು ವಿಶೇಷ ತನಿಖಾ ತಂಡ ರಚಿಸಲಾಗಿತ್ತು. ಇದೀಗ ಓರ್ವ ಆರೋಪಿ ಅರೆಸ್ಟ್ ಆಗಿದ್ದು ಉಳಿದವರ ಪತ್ತೆಗೆ ಬಲೆ ಬೀಸಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *