Connect with us

LATEST NEWS

ಮಂಗಳೂರಿನಲ್ಲಿ ನಾಥೂರಾಮ್ ಗೋಡ್ಸೆ ಜನ್ಮ ದಿನಾಚರಣೆ ಒರ್ವನ ಬಂಧನ

ಮಂಗಳೂರಿನಲ್ಲಿ ನಾಥೂರಾಮ್ ಗೋಡ್ಸೆ ಜನ್ಮ ದಿನಾಚರಣೆ ಒರ್ವನ ಬಂಧನ

ಮಂಗಳೂರು ಮೇ 22: ಮಂಗಳೂರಿನಲ್ಲಿ ಮೇ 19 ರಂದು ನಾಥೂರಾಮ್ ಗೋಡ್ಸೆ ಅವರ ಜನ್ಮದಿನಾಚರಣೆ ಆಚರಿಸಿದ ಹಿನ್ನಲೆಯಲ್ಲಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ಒರ್ವನನ್ನು ಬಂಧಿಸಿದ್ದಾರೆ.

ಬಂಧಿತನನ್ನು ಹಿಂದೂ ಮಹಾಸಭಾ ಕರ್ನಾಟಕ ರಾಜ್ಯ ಪ್ರಭಾರಿ ರಾಜೇಶ್ ಪೂಜಾರಿ ಎಂದು ಗುರುತಿಸಲಾಗಿದ್ದು, ರಾಜೇಶ್ ಪೂಜಾರಿ ಅವರ ಮನೆಯಲ್ಲಿ ಮೇ 19 ರಂದು ನಾಥೂರಾಮ್ ಗೋಡ್ಸೆ ಜನ್ಮದಿನಾಚರಣೆ ಹಿನ್ನಲೆಯಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾ ನಾಥೂರಾಮ್ ಗೋಡ್ಸೆ ಜನ್ಮದಿನಾಚರಣೆಯನ್ನು ಆಚರಿಸಿದ್ದರು.

ಮಂಗಳೂರಿನಲ್ಲಿ ನಡೆದ ನಾಥೂರಾಮ್ ಗೊಡ್ಸೆ ಜನ್ಮದಿನಾಚರಣೆ ಭಾರಿ ವಿವಾದಕ್ಕೀಡಾಗಿತ್ತು. ಈ ಹಿನ್ನಲೆಯಲ್ಲಿ ಉಳ್ಳಾಲ ಪೊಲೀಸರು ಸ್ವಯಂಪ್ರೇರಿತವಾಗಿ ದೂರು ದಾಖಲಿಸಿ ಹಿಂದೂ ಮಹಾಸಭಾ ಕರ್ನಾಟಕ ರಾಜ್ಯ ಪ್ರಭಾರಿ ರಾಜೇಶ್ ಪೂಜಾರಿ, ಹಿಂದೂ ಮಹಾಸಭಾ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಹಾಗೂ ಲೋಕೇಶ್ ಮತ್ತು ಲೋಹಿತ್ ಎಂಬವರ ಮೇಲೆ ಎಫ್ ಐಆರ್ ದಾಖಲಿಸಿದ್ದರು.

ಬಂಧಿತ ರಾಜೇಶ್ ಪೂಜಾರಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Facebook Comments

comments