Connect with us

    KARNATAKA

    ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗೆ ಕಡ್ಡಾಯವಾಗಿ ರಾಷ್ಟ್ರಗೀತೆ ಹಾಡಿಸಬೇಕು

    ಬೆಂಗಳೂರು, ಆಗಸ್ಟ್ 18: ಇನ್ನು ಮುಂದೆ ನಿತ್ಯ ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡಿಸೋದು ಕಡ್ಡಾಯ ಎಂದು ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.

    ನಗರದ ಪ್ರತಿಷ್ಠಿತ ಖಾಸಗಿ ಶಾಲೆಗಳಾದ ಬಿಷಪ್ ಕಾಟನ್, ಬಾಲ್ಡ್ ವಿನ್, ಸೆಂಟ್ ಜೋಸೆಫ್ ಶಾಲೆಗಳು ರಾಷ್ಟ್ರಗೀತೆ ಹಾಡಿಸದೇ ಇರುವ ಬಗ್ಗೆ ಶಿಕ್ಷಣ ಇಲಾಖೆಗೆ ದೂರು ಸಲ್ಲಿಕೆ ಆಗಿತ್ತು. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ. ಇದರನುಸಾರ ಎಲ್ಲಾ ಶಾಲೆಗಳಲ್ಲಿ ಮುಂಜಾನೆ ವೇಳೆಯಲ್ಲಿ ವಿದ್ಯಾರ್ಥಿಗಳಿಂದ ಕಡ್ಡಾಯವಾಗಿ ರಾಷ್ಟ್ರಗೀತೆ ಹಾಡಿಸಬೇಕು ಎಂದು ಸುತ್ತೋಲೆ ಹೊರಡಿಸಿದೆ.

    ಇದೀಗ ಸರ್ಕಾರ ಅಧಿಕೃತವಾಗಿ ಆದೇಶವನ್ನು ಹೊರಡಿಸಿದೆ. ಈ ಆದೇಶದಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲಾ, ಕಾಲೇಜುಗಳಲ್ಲಿ (1-12) ಕಡ್ಡಾಯವಾಗಿ ರಾಷ್ಟ್ರಗೀತೆ ಹಾಡಬೇಕು ಸಾಮೂಹಿಕ ಪ್ರಾರ್ಥನೆ ಮಾಡಲು ಸ್ಥಳ ಅವಕಾಶ ಇಲ್ಲದೆ ಹೋದರೆ ಶಾಲಾ ಕೊಠಡಿಗಳಲ್ಲೆ ರಾಷ್ಟ್ರಗೀತೆ ಹಾಡಿಸುವಂತೆ ತಿಳಿಸಿದೆ. 

    Share Information
    Advertisement
    Click to comment

    You must be logged in to post a comment Login

    Leave a Reply