Connect with us

LATEST NEWS

ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನ – ಅರಣ್ಯ ಇಲಾಖೆಯ ಹುತಾತ್ಮ ಅಧಿಕಾರಿ, ಸಿಬ್ಬಂದಿಗೆ ಗೌರವ ನಮನ ಸಲ್ಲಿಕೆ

ಮಂಗಳೂರು ಸೆಪ್ಟೆಂಬರ್ 11: ಇಂದು ಮಂಗಳೂರು ಅರಣ್ಯ ವೃತ್ತ ಕಛೇರಿ ಯಲ್ಲಿ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿ ದಂತಹ ಅರಣ್ಯ ಅಧಿಕಾರಿಗಳ ಹುತಾತ್ಮ ದಿನಾಚರಣೆಯನ್ನು ಆಚರಿಸಲಾಯಿತು.


ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯವರಾದ ಡಾ. ದಿನೇಶ್ ಕುಮಾರ್ ಭಾಗವಹಿಸಿ ಅರಣ್ಯ ಹುತಾತ್ಮರ ಸ್ಮರಕಕ್ಕೆ ಗೌರವ ವಂದನೆಗಳನ್ನು ಸಲ್ಲಿಸಿದರು. ಮತ್ತು ಅರಣ್ಯ ಹುತಾತ್ಮರ ದಿನಾಚರಣೆಯ ಮಹತ್ವದ ಕುರಿತು ಮಾತನಾಡುತ್ತ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿ ದಂತಹ ಸರ್ವೋಚ್ಚ ತ್ಯಾಗವನ್ನು ಮಾಡಿ ಸಮರ್ಪಣ ಮನೋಭಾವದ ಹಲವು ಅರಣ್ಯ ಅಧಿಕಾರಿಗಳ ಅಸಾಧಾರಣ ಪ್ರಯತ್ನಗಳು ಧೈರ್ಯ ಶೀಲ ಕಾರ್ಯಗಳು ಮತ್ತು ಸರ್ವೋಚ್ಚ ತ್ಯಾಗಗಳು ಅಪಾಯಕ್ಕೆ ಒಳಗಾದ ನೈಸರ್ಗಿಕ ಸಂಪನ್ಮೂಲಗಳನ್ನು ಮತ್ತು ವನ್ಯಜೀವಿಗಳನ್ನು ಸಂರಕ್ಷಿಸಿ ಕಾಪಾಡಲು ಮುಂದಿನ ಪೀಳಿಗೆಗೆ ಸ್ಪೂರ್ತಿದಾಯಕ ಎಂದು ತಿಳಿಸಿದರು.


ಸದ್ರಿ ಕಾರ್ಯಕ್ರಮದಲ್ಲಿ ಮಂಗಳೂರು ವೃತ್ತದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು, ವಲಯ ಅರಣ್ಯಾಧಿಕಾರಿಗಳು, ಉಪ ವಲಯ ಅರಣ್ಯ ಅಧಿಕಾರಿಗಳು, ಅರಣ್ಯ ರಕ್ಷಕರು, ಅರಣ್ಯ ವೀಕ್ಷಕರು ಮತ್ತು ಕಚೇರಿ ಸಿಬ್ಬಂದಿಗಳು ಹೂವು ಗುಚ್ಚ ಸಮರ್ಪಿಸಿ ಗೌರವ ಸಲ್ಲಿಸಿದರು.