Connect with us

DAKSHINA KANNADA

ರಾಷ್ಟ್ರೀಯ ಹೆದ್ದಾರಿ 75ರ ಸಕಲೇಶಪುರ ತಾಲ್ಲೂಕಿನ ದೋಣಿಗಾಲ್ ಬಳಿ ರಸ್ತೆ ಕುಸಿತ…!!

ಹಾಸನ ಜುಲೈ 22: ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಭಾರಿ ಮಳೆಗೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ರಸ್ತೆ ಕುಸಿತ ಉಂಟಾಗಿದೆ.  ಶಿರಾಡಿ ಘಾಟ್‌ ರಸ್ತೆಯಲ್ಲಿ ವಾಹನ ಸಂಚಾರ ಬಂದ್‌ ಮಾಡಲಾಗಿದೆ.


ರಾಷ್ಟ್ರೀಯ ಹೆದ್ದಾರಿಯ ಸಕಲೇಶಪುರ ತಾಲ್ಲೂಕಿನ ದೋಣಿಗಾಲ್ ಬಳಿ ರಸ್ತೆ ಕುಸಿದಿದ್ದು, ವಾಹನ ಸಂಚಾರಕ್ಕೆ ಸಮಸ್ಯೆ ಎದುರಾಗಿದೆ.  ಮಂಗಳೂರಿಗೆ ತೆರಳುವವರು ಬೇಲೂರು ಮೂಲಕ ಚಾರ್ಮಾಡಿ ಘಾಟ್‌ನಲ್ಲಿ ತೆರಳುವಂತೆ ಸೂಚನೆ ನೀಡಲಾಗಿದ್ದು. ಮೂಡಿಗೆರೆ, ಹಾನುಬಾಳು, ಕೊಟ್ಟಗೆಹಾರದ ಮೂಲಕ ಬದಲಿ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

ಧರ್ಮಸ್ಥಳ, ಮಂಗಳೂರು, ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಬೆಳಿಗ್ಗೆ ಭೂಕುಸಿತವಾದ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ತಾತ್ಕಾಲಿಕವಾಗಿ ಸಂಚಾರ ಬಂದ್‌ ಮಾಡಲಾಗಿದೆ. ಸ್ಥಳಕ್ಕೆ ಉಪವಿಭಾಗಾಧಿಕಾರಿ ಪ್ರತೀಕ್‌, ತಹಶೀಲ್ದಾರ್‌ ಜಯಕುಮಾರ್‌, ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.