LATEST NEWS
ಹಳೆಯ ನೇತ್ರಾವತಿ ಸೇತುವೆಯಲ್ಲಿ ದುರಸ್ತಿ ಕಾರ್ಯ ; ಎಪ್ರಿಲ್ 1ರಿಂದ 30ರ ವರೆಗೆ ಸಂಚಾರಕ್ಕೆ ಬದಲಿ ಮಾರ್ಗ ಬಳಸಲು ಸೂಚನೆ

ಮಂಗಳೂರು ಮಾರ್ಚ್ 30: ಮಂಗಳೂರು ನಗರದಿಂದ ಕೇರಳ ರಾಜ್ಯಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66 ರ ಹಳೆಯ ನೇತ್ರಾವತಿ ಸೇತುವೆಯಲ್ಲಿ (ತಲಪಾಡಿ – ಮಂಗಳೂರು ನಗರಕ್ಕೆ ಬರುವ) ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ದಿನಾಂಕ:01-04-2025 ರಿಂದ 30-04-2025 ರವರೆಗೆ 30 ದಿನಗಳು ಪ್ರಮುಖ ದುರಸ್ತಿ ಕಾಮಗಾರಿಯನ್ನು ನಡೆಯಲಿದೆ. ಈಗಾಗಿ ಒಂದು ಸೇತುವೆಯಲ್ಲಿ (ಮಂಗಳೂರು ನಗರದಿಂದ ತಲಪಾಡಿ ಕಡೆಗೆ ಹೋಗುವ) ವಾಹನಗಳ ಸಂಚಾರಕ್ಕಾಗಿ ದ್ವಿಮುಖ ಸಂಚಾರ ವ್ಯವಸ್ಥೆ ಮಾಡಲಾಗಿರುತ್ತದೆ. ಇದರಿಂದ ಪಂಪುವೆಲ್ನಿಂದ ತೊಕ್ಕೊಟ್ಟು ವರೆಗೆ ಸದ್ರಿ ಹೆದ್ದಾರಿಯ ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿರುತ್ತದೆ.

ಆದ್ದರಿಂದ ಹಳೆಯ ನೇತ್ರಾವತಿ ಸೇತುವೆಯಲ್ಲಿ ದುರಸ್ತಿ ಕಾಮಗಾರಿ ನಡೆಯುವ ದಿನಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುವ ಸಾದ್ಯತೆಗಳಿದ್ದು, ನೇತ್ರಾವತಿ ಸೇತುವೆಯ ಮೂಲಕ ಸಂಚರಿಸುವ ಎಲ್ಲಾ ವಾಹನಗಳ ಚಾಲಕರು/ ಸವಾರರು ಮತ್ತು ಸಾರ್ವಜನಿಕರು ಎಚ್ಚರಿಕೆಯಿಂದ ಚಲಿಸಬೇಕು ಹಾಗೂ ಪೀಕ್ ಅವರ್ಸ್ ಗಳಲ್ಲಿ ಸದರಿ ಮಾರ್ಗದಲ್ಲಿ ವಾಹನ ಸಂಚಾರವನ್ನು avoid ಮಾಡಲು ಕೋರಿದೆ.
ಸಾರ್ವಜನಿಕರಿಗೆ ಉಪಯೋಗಿಸಬಹುದಾದ ಇತರೆ ಮಾರ್ಗಗಳು
*ಮುಡಿಪು-ಕೊಣಾಜೆ-ದೇರಳಕಟ್ಟೆ ಕಡೆಯಿಂದ ಮಂಗಳೂರು ನಗರ ಕಡೆಗೆ ಸಂಚರಿಸುವ ಸ್ಥಳೀಯ ಲಘು ವಾಹನಗಳು/ದ್ವ್ವಿ-ಚಕ್ರ ವಾಹನಗಳು ಕೊಣಾಜೆ- ಹರೇಕಳ(ಬ್ರಿಡ್ಜ್) ಅಡ್ಯಾರ್ ಮುಖಾಂತರ ಮಂಗಳೂರು ಕಡೆಗೆ ಸಂಚರಿಸಬಹುದಾಗಿದೆ.
*ಮಂಗಳೂರು ಕಡೆಯಿಂದ ಕೊಣಾಜೆ-ಮುಡಿಪು-ದೇರಳಕಟ್ಟೆ ಕಡೆಗೆ ಸಂಚರಿಸುವ ಸ್ಥಳೀಯ ದ್ವಿ-ಚಕ್ರ / ಲಘು ವಾಹನಗಳು ಅಡ್ಯಾರ್-ಹರೇಕಳ(ಬ್ರಿಡ್ಜ್) ಮುಖಾಂತರ ಸಂಚರಿಸುವುದು.
*ತಲಪಾಡಿ, ಉಳ್ಳಾಲ ಕಡೆಯಿಂದ ಬೆಂಗಳೂರು – ಉಪ್ಪಿನಂಗಡಿ – ಪುತ್ತೂರು – ಸುಳ್ಯ ಕಡೆಗೆ ಸಂಚರಿಸುವ ವಾಹನಗಳು ತೊಕ್ಕೊಟ್ಟಿನಿಂದ ಬಲಕ್ಕೆ ತಿರುಗಿ ಮುಡಿಪು – ಬೋಳಿಯಾರ್ -ಮೆಲ್ಕಾರ್ ಮೂಲಕ ಸಂಚರಿಸುವುದು
*ಬಿ.ಸಿ ರೋಡ್ ಕಡೆಯಿಂದ ತಲಪಾಡಿ ಮತ್ತು ಕೇರಳ ಕಡೆಗೆ ಸಂಚರಿಸುವ ವಾಹನಗಳು ಮೆಲ್ಕಾರ್-ಮುಡಿಪು-ತೊಕ್ಕೊಟ್ಟು ಮುಖಾಂತರ ಸಂಚರಿಸುವುದು.
Continue Reading