Connect with us

LATEST NEWS

ಉಗ್ರ ಸಂಘಟನೆಗಳ ಪರ ಒಲವು – ಮಾಜಿ ಶಾಸಕ ಇದಿನಬ್ಬ ಮೊಮ್ಮಗ ಎನ್‍ಐಎ ವಶಕ್ಕೆ

ಮಂಗಳೂರು ಅಗಸ್ಟ್ 05: ಉಗ್ರ ಸಂಘಟನೆ ಪರ ಒಲವು ಹೊಂದಿದ್ದಾರೆ ಎಂಬ ಆರೋಪದ ಮೇಲೆ ಮಾಜಿ ಶಾಸಕ ದಿ.ಇದಿನಬ್ಬ ಅವರ ಮೊಮ್ಮಗನನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಮಾಜಿ ಶಾಸಕ ದಿ. ಇದಿನಬ್ಬ ಅವರ ಪುತ್ರ ಬಿ.ಎಂ. ಬಾಷಾ ಅವರ ಮಗ ಉಮ್ಮರ್ ಅಬ್ದುಲ್ ರೆಹಮಾನ್ (25) ಎಂದು ಗುರುತಿಸಲಾಗಿದ್ದು, ಇವರು ವೃತ್ತಿಯಲ್ಲಿ ಎಂಜಿನಿಯರ್.


ನಿನ್ನೆ ಎರಡು ವಾಹನಗಳಲ್ಲಿ ಬಂದಿದ್ದ ರಾಷ್ಟ್ರೀ ಯ ತನಿಖಾ ದಳದ ತಂಡ ಉಳ್ಳಾಲದಲ್ಲಿರುವ ಅವರ ಮನೆ ಮೇಲೆ ದಾಳಿ ನಡೆಸಿದ ಮಧ್ಯಾಹ್ನದವರೆಗೂ ವಿಚಾರಣೆ ನಡೆಸಿ, ಉಮರ್ ನನ್ನು ವಶಕ್ಕೆ ಪಡೆದುಕೊಂಡಿದೆ. ಮಧ್ಯಾಹ್ನ ನಂತರವೂ ತನಿಖೆ ಮುಂದುವರಿಸಿದ ತಂಡ ಸಾಕ್ಷ್ಯ ಗಳ ಸಂಗ್ರಹಣೆ ನಡೆಸಿ, ಸಂಜೆ 7.30ರ ಸುಮಾರಿಗೆ ವಾಪಸಾಗಿದೆ. ತಂಡದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು 24 ಅಧಿಕಾರಿಗಳಿದ್ದರು.


ಕಳೆದ ಮಾರ್ಚ್‌ 15 ರಂದು ದೇಶದ 11 ಸ್ಥಳಗಳಾದ ಕೇರಳದ ಕಣ್ಣೂರು, ಮಣಪ್ಪುರಂ, ಕೊಲ್ಲಂ, ಕಾಸರಗೋಡು ಮತ್ತು ಬೆಂಗಳೂರಿನ ಎರಡು ಸ್ಥಳ ಹಾಗೂ ದೆಹಲಿಯ ಕೆಲವೆಡೆ ರಾಷ್ಟ್ರೀ ಯ ತನಿಖಾ ದಳದ ತಂಡ ದಾಳಿ ನಡೆಸಿತ್ತು. ಕೇರಳ ಮೂಲದ ಮಹಮ್ಮದ್ ಅಮೀನ್ ಅಲಿಯಾಸ್ ಅಬೂ ಯಹ್ಯಾ ನೇತೃತ್ವದಲ್ಲಿ ಭಯೋತ್ಪಾದನಾ ಚಟುವಟಿಕೆ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿತ್ತು.


ಮಹಮ್ಮದ್ ಅಮೀನ್ ತಂಡ ಕರ್ನಾಟಕ ಮತ್ತು ಕೇರಳದಲ್ಲಿ ಐಸಿಸ್ ಸಂಘಟನೆಗೆ ನೇಮಿಸಿದ್ದ ಹಲವು ಯುವಕರ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಇದರ ಆಧಾರದ ಮೇಲೆ ಉಳ್ಳಾ ಲದ ಮಾಜಿ ಶಾಸಕ ಇದಿನಬ್ಬ ಕುಟುಂಬದ ಸದಸ್ಯರೊಬ್ಬರು ಐಸಿಸ್ ಪರ ಒಲವು ಹೊಂದಿರುವ ಬಗ್ಗೆ ಮಾಹಿತಿ ಪಡೆದು ದಾಳಿ ನಡೆದಿದೆ. ಅಲ್ಲದೆ, ಐಎಸ್ ಪರವಾದ ಹಲವು ಯುಟ್ಯೂಬ್ ಚಾನೆಲ್ ಗಳು, ಇಸ್ಟ್ಯಾ ಗ್ರಾಂ ಮತ್ತು ಟೆಲಿಗ್ರಾಮ್ ಮೂಲಕ ಮಾಹಿತಿ ಪಡೆಯುತ್ತಿದ್ದ ಎಂದು ತಿಳಿದುಬಂದಿದೆ. ಇದಕ್ಕೆ ಸಂಬಂಧಿಸಿದ ಕೆಲವು ತಾಂತ್ರಿಕ ಸಾಕ್ಷ್ಯ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.