Connect with us

LATEST NEWS

ರಾಷ್ಟ್ರೀಯ ಮಟ್ಟದ ಐಸ್ ಸ್ಕೇಟಿಂಗ್‌: ಅನಘಾಗೆ ಬೆಳ್ಳಿ ಪದಕ

ರಾಷ್ಟ್ರೀಯ ಮಟ್ಟದ ಐಸ್ ಸ್ಕೇಟಿಂಗ್‌: ಅನಘಾಗೆ ಬೆಳ್ಳಿ ಪದಕ

ಮಂಗಳೂರು ಅಗಸ್ಟ್ 14: ದೆಹಲಿಯ ಗುರುಗ್ರಾಮದಲ್ಲಿ ಐಸ್ ಸ್ಕೇಟಿಂಗ್‌ ಅಸೋಸಿಯೇಷನ್ ಆಫ್ ಇಂಡಿಯಾ ಆಯೋಜಿಸಿದ ರಾಷ್ಟ್ರೀಯ ಸ್ಪೀಡ್ ಐಸ್ ಸ್ಕೇಟಿಂಗ್‌ ಚಾಂಪಿಯನ್‌ಶಿಪ್‌-2019 ನಲ್ಲಿ ಮಂಗಳೂರಿನ ಅನಘಾ ಬೆಳ್ಳಿ ಪದಕ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

2019ರ ಆಗಸ್ಟ್ 8 ಹಾಗೂ 9 ರಂದು ನಡೆದ ರಾಷ್ಟ್ರೀಯ ಮಟ್ಟದ ಐಸ್ ಸ್ಕೇಟಿಂಗ್‌ ನ 500 ಮೀಟರ್ ಐಸ್ ರಿಂಕ್ ರೇಸ್ ನ 10 ವರ್ಷದೊಳಗಿನ ವಿಭಾಗದಲ್ಲಿ ಅನಘಾ ಬೆಳ್ಳಿ ಪದಕ ಪಡೆದಿದ್ದಾರೆ. ಮಂಗಳೂರಿನ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ದಂಪತಿಯ ಪುತ್ರಿಯಾದ ಅನಘಾ ಬಿಜೈ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್ ನ 4‌ ನೇ‌ ತರಗತಿಯ ವಿದ್ಯಾರ್ಥಿನಿ.

ಮಂಗಳೂರಿನ ಹೈ ಫ್ಲೈಯರ್ಸ್ ಸ್ಕೇಟಿಂಗ್‌ ಕ್ಲಬ್ ನ ಸದಸ್ಯೆಯಾಗಿರುವ ಅನಘಾ ತರಬೇತುದಾರರಾದ ಮೋಹನ್ ದಾಸ್.ಕೆ ಹಾಗೂ ಜಯರಾಜ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.ರಾಷ್ಟ್ರೀಯ ಐಸ್ ಸ್ಕೇಟಿಂಗ್‌ ತರಬೇತುದಾರ ಅವಧೂತ್ ಥಾವಡೆ ಅವರಿಂದ ಅನಘಾ ಐಸ್ ಸ್ಕೇಟಿಂಗ್‌ ತರಬೇತಿ ಪಡೆಯುತ್ತಿದ್ದಾರೆ.

Facebook Comments

comments